ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಕ್ಷೇತ್ರದ ಅಭಿವೃದ್ಧಿಗೆ ವಿಶೇಷ ಅನುದಾನ ನೀಡುವಂತೆ ಉಡುಪಿ ಜಿಲ್ಲೆಯ ಶಾಸಕರು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮನವಿ ನೀಡಿದ್ದಾರೆ.
ಮೊದಲ ಬಾರಿಗೆ ನೂತನವಾಗಿ ಶಾಸಕರಾಗಿ ಆಯ್ಕೆಯಾಗಿ ಒಂದು ವರ್ಷ ಏಳು ತಿಂಗಳು ಪೂರ್ಣಗೊಳಿಸಿ, ಐದನೇ ಅಧಿವೇಶನದಲ್ಲಿ ಪಾಲ್ಗೊಳ್ಳುತ್ತಿದ್ದು, ಕ್ಷೇತ್ರದ ಜನರಿಗೆ ನೂತನವಾಗಿ ಆಯ್ಕೆಯಾದ ನಮ್ಮೆಲ್ಲರ ಶಾಸಕರ ಮೇಲೆ ಹೆಚ್ಚಿನ ನಿರೀಕ್ಷೆ ಇದೆ ಕ್ಷೇತ್ರದ ಅಭಿವೃದ್ಧಿ ಕೆಲಸಗಳಿಗೆ ಹಾಗೂ ನಿರ್ವಹಣೆಯ ಕೆಲಸಗಳಿಗೆ ಜನರಿಂದ ದಿನಂಪ್ರತಿ ಮನವಿಗಳನ್ನು ಸ್ವೀಕರಿಸುತ್ತಿದ್ದು, ಜನರ ಸಮಸ್ಯೆಗಳನ್ನು ನಿವಾರಿಸಲು ಮತ್ತು ಕ್ಷೇತ್ರದಲ್ಲಿ ಹೊಸ ಅಗತ್ಯ ಯೋಜನೆಗಳನ್ನು ಪ್ರಾರಂಭಿಸಲು ಜನರು ನಿರಂತರವಾಗಿ ಒತ್ತಾಯಿಸುತ್ತಿದ್ದಾರೆ.
ನಾವು ಶಾಸಕರಾದ ಆಗಿನಿಂದಲೂ ಯಾವುದೇ ಗಮನಾರ್ಹ ಅನುದಾನ ಲಭಿಸದೆ ಜನರ ಆದ್ಯತೆಯ ಬೇಡಿಕೆಗಳಿಗೆ, ತುರ್ತು ಸಮಸ್ಯೆಗಳಿಗೆ, ಮೂಲಭೂತ ಸೌಕರ್ಯಗಳ ನಿರ್ವಹಣೆಗೆ ಹಾಗೂ ಅಭಿವೃದ್ಧಿಯ ಕಾಮಗಾರಿಗಳಿಗೆ ಸ್ಪಂದಿಸಲು ಸಾಧ್ಯವಾಗುತ್ತಿಲ್ಲ. ಪ್ರಗತಿಯಲ್ಲಿರುವ ಅನೇಕ ಕಾಮಗಾರಿಗಳು ನಿಧಾನಗತಿಯಲ್ಲಿದ್ದು ಅಥವಾ ಸ್ಥಗಿತಗೊಂಡಿದೆ. ಆದ್ದರಿಂದ ಪ್ರಥಮ ಬಾರಿ ಶಾಸಕರಾಗಿ ಆಯ್ಕೆಯಾದ ನಮ್ಮ ಕ್ಷೇತ್ರಕ್ಕೆ ಮಳೆಹಾನಿ, ಕೃಷಿಹಾನಿ, ಸಮುದ್ರ ಕೊರತೆ ಆಸ್ಪತ್ರೆ ಶಾಣ ಕಟ್ಟಡ ರಸ್ತೆಗಳ ದುರಸ್ತಿ ನಿರ್ಮಾಣ ಕಾಲು ಸಂಕ, ಮತ್ತು ಮೋರಿಗಳ ದುರಸ್ತಿ, ನಿರ್ಮಾಣ, ನದಿ ದಂಡೆ ಸುರಕ್ಷತೆ ಹಾಗೂ ವಿದ್ಯುತ್ ದಾರಿದೀಪಗಳ ಸೌಕರ್ಯ ಇತ್ಯಾದಿ ಸಮಸ್ಯೆಗಳಿಗೆ ಸ್ಪಂದಿಸಲು ಶಾಸಕರಾದ ಎ. ಕಿರಣ್ ಕುಮಾರ್ ಕೊಡ್ಡಿ, ಬೈಂದೂರು ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆ, ಉಡುಪಿ ಶಾಸಕ ಯಶ್ ಪಾಲ್ ಸುವರ್ಣ, ಕಾಪು ಶಾಸಕ ಸುರೇಶ್ ಶೆಟ್ಟಿ ಗುರ್ಮೆ ಹಾಗೂ ರಾಜ್ಯದ ವಿವಿಧ ಶಾಸಕರು ಮನವಿ ನೀಡಿದ್ದಾರೆ.