ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಸೇನಾಪುರ ಸಮೀಪ ಹೆಚ್ಚೇನು ದಾಳಿಗೆ ಸಿಲುಕಿ ಮೂವರು ಗಾಯಗೊಂಡು ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಹೆಮ್ಮಾಡಿ ನಿವಾಸಿ ಯೂಸುಫ್ ಸಾಹೇಬ್ (62) ಮೃತಪಟ್ಟವರು.
ಗುಜರಿ ವ್ಯಾಪಾರ ಮಾಡಿಕೊಂಡಿದ್ದ ಅವರು ಬಗ್ವಾಡಿ ರಸ್ತೆಯಲ್ಲಿ ಸಾಗುತ್ತಿದ್ದಾಗ ಏಕಾಏಕಿ ಹೆಚ್ಚೇನು ದಾಳಿ ನಡೆಸಿತು. ಗಂಭೀರವಾಗಿ ಅಸ್ವಸ್ಥಗೊಂಡಿದ್ದ ಅವರನ್ನು ಕುಂದಾಪುರ ಸರಕಾರಿ ಆಸ್ಪತ್ರೆಗೆ ಕರೆತರಲಾಗಿದ್ದು, ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದಾಗಿ ತಿಳಿಸಿದ್ದರು.