ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಡಾ. ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನ ಉಡುಪಿ, ಡಾ. ಶಿವರಾಮ ಕಾರಂತ ಟ್ರಸ್ಟ್ ಕೊಟತಟ್ಟು ಗ್ರಾಮ ಪಂಚಾಯತ್ ವತಿಯಿಂದ ಕೊಡಮಾಡುವ ಕಾರಂತ ಬಾಲಪುರಸ್ಕಾರಕ್ಕೆ ಕುಂದಾಪುರದ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢ ಶಾಲೆ 10ನೇ ತರಗತಿ ವಿದ್ಯಾರ್ಥಿನಿ ಮನ್ವಿತಾ. ಎಸ್ ಆಯ್ಕೆಯಾಗಿರುತ್ತಾರೆ.
ಅವರಿಗೆ, ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಬೋಧಕ-ಬೋಧಕೇತರ ವರ್ಗದವರು ಅಭಿನಂದನೆ ಸಲ್ಲಿಸಿರುತ್ತಾರೆ.