Site icon Kundapra.com ಕುಂದಾಪ್ರ ಡಾಟ್ ಕಾಂ

ಅಂಕದಕಟ್ಟೆ: ಸೈಕಲ್-ರಿಕ್ಷಾ ಡಿಕ್ಕಿ. ಸೈಕಲ್ ಸವಾರ ಸಾವು

ಕುಂದಾಪುರ: ಇಲ್ಲಿನ ಅಂಕದಕಟ್ಟೆಯಲ್ಲಿ ಸರ್ಜನ್ ಆಸ್ಪತ್ರೆಯ ಸಮೀಪ ರಿಕ್ಷಾವೊಂದು ಸೈಕಲ್ ಸವಾರನಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡ ಸೈಕಲ್ ಸವಾರ ದಾರುಣವಾಗಿ ಮೃತಪಟ್ಟ ಘಟನೆ ಇಂದು ಸಂಜೆ ವರದಿಯಾಗಿದೆ. ಅಂಕದಕಟ್ಟೆಯ ನಿವಾಸಿ ರಮಾನಂದ ಹೆಬ್ಬಾರ್ (55) ಅಪಘಾತದಲ್ಲಿ ಮೃತ ದುರ್ದೈವಿ.

ಅಂಕದಕಟ್ಟೆಯಲ್ಲಿ ದಿನಸಿ ಅಂಗಡಿ ಹೊಂದಿದ್ದ ರಮಾನಂದ ಹೆಬ್ಬಾರ್ ಹತ್ತಿರದ ಅಂಗಡಿಯೊಂದರಿಂದ ಹಾಲಿನ ಪ್ಯಾಕೇಟ್ ಖರೀದಿಸಿ ಸೈಕಲಿನಲ್ಲಿ ಸರ್ಜನ್ ಆಸ್ಪತ್ರೆ ಬಳಿಯ ಡಿವೈಡರ್ ದಾಟುತ್ತಿದ್ದ ವೇಳೆ ಕೋಟೇಶ್ವರ ಕಡೆಯಿಂದ ಬಂದ ರಿಕ್ಷಾ ಡಿಕ್ಕಿ ಹೊಡೆದಿತ್ತು. ಡಿಕ್ಕಿಯ ರಭಸಕ್ಕೆ ತಲೆಗೆ ಗಂಭೀರ ಏಟು ತಗಲಿದ್ದ ಅವರನ್ನುಕೂಡಲೇ ಆಸ್ಪತ್ರೆಗೆ ಸಾಗಿಸಿದರಾದರೂ ಅಷ್ಟರಲ್ಲೇ ಅವರು ಮೃತಪಟ್ಟಿದ್ದರು.

ಸ್ಥಳಕ್ಕೆ ಕುಂದಾಪುರ ಡಿವೈ‌ಎಸ್ಪಿ ಮಂಜುನಾಥ ಶೆಟ್ಟಿ ಸೇರಿದಂತೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಕುಂದಾಪುರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Exit mobile version