ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಆಜ್ರಿ ಗ್ರಾಮದ ನಿವಾಸಿ ಬಾಬಿ (38) ಅವರು ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು. ಇದರಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಡಿ.16ರಂದು ಇಲಿ ಪಾಷಣ ಸೇವಿಸಿದ್ದರು.
ಅವರನ್ನು ಕೂಡಲೇ ಕುಂದಾಪುರ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಡಿ. 18ರಂದು ಮೃತಪಟ್ಟಿದ್ದಾರೆ ಎಂದು ಸಹೋದರ ದಿನೇಶ ಅವರು ಪೋಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.
ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.