ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಉದ್ಯಮಿಯಾಗಿದ್ದ ಐರೋಡಿ ಭಾಸ್ಕರ್ ಎಚ್. ಶೆಟ್ಟಿ (83) ಅವರು ಅಲ್ಪಕಾಲದ ಅಸೌಖ್ಯದಿಂದ ಮಣಿಪಾಲ ಆಸ್ಪತ್ರೆಯಲ್ಲಿ ಡಿ.20ರಂದು ನಿಧನರಾದರು.
ಮೃತರು ಪತ್ನಿ, ಮೂವರು ಪುತ್ರಿಯರು, ಅಳಿಯಂದಿರು, ಮೊಮ್ಮಕ್ಕಳನ್ನು ಅಗಲಿದ್ದಾರೆ. ಇವರು ದುಬೈ ಉದ್ಯಮಿ ವಕ್ವಾಡಿ ಪ್ರವೀಣ್ ಕುಮಾರ್ ಶೆಟ್ಟಿ ಅವರ ಪತ್ನಿಯ ತಂದೆ. ಮೃತರ ಅಂತ್ಯಕ್ರಿಯೆ ಡಿ.21 ಶನಿವಾರದಂದು ಬೆಳಿಗ್ಗೆ 11 ಗಂಟೆಗೆ ಕೊಕ್ಕರ್ಣೆ ಹಳ್ಳಿಯ ಸ್ವಗೃಹದಲ್ಲಿ ನಡೆಯಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.

