Kundapra.com ಕುಂದಾಪ್ರ ಡಾಟ್ ಕಾಂ

ಊರಿನ ಸಾಂಸ್ಕೃತಿಕ ಶ್ರೀಮಂತಿಕೆಯಲ್ಲಿ ಕಲಾ ಸಂಸ್ಥೆಗಳ ಪಾತ್ರ ಹಿರಿದು: ಜತೀಂದ್ರ ಮರವಂತೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು:
ಊರನ್ನು ಸಾಂಸ್ಕೃತಿಕವಾಗಿ ಶ್ರೀಮಂತವನ್ನಾಗಿಡಲು ಕಲಾ ಸಂಸ್ಥೆಗಳ ಪಾತ್ರ ಹಿರಿದು. ಆ ನಿಟ್ಟಿನಲ್ಲಿ ಕಳೆದ ಎರಡೂವರೆ ದಶಕದಿಂದ ಸಕ್ರೀಯವಾಗಿರುವ ಯುಸ್ಕೋರ್ಡ್ ಟ್ರಸ್ಟ್ ಇನ್ನಿತರ ಕಲಾ ಸಂಸ್ಥೆಗಳ ಪೋಷಕ ಸಂಸ್ಥೆಯಾಗಿಯೂ ಬೆಳೆದಿದೆ ನಿಂತಿದೆ ಎಂದು ಆಡಿಟರ್ ಹಾಗೂ ಟ್ಯಾಕ್ಸ್ ಕನ್ಸಲ್ಟೆಂಟ್ ಜತೀಂದ್ರ ಮರವಂತೆ ಹೇಳಿದರು.

ಅವರು ಶುಕ್ರವಾರ ಯುಸ್ಕೋರ್ಡ್ ಟ್ರಸ್ಟ್ ರಿ. ಬೈಂದೂರು ನೇತೃತ್ವದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದೊಂದಿಗೆ ಇಲ್ಲಿನ ಶಾರದಾ ವೇದಿಕೆಯಲ್ಲಿ ಆಯೋಜಿಸಲಾದ ವರ್ಷ ವೈಭವ – 3 ದಿನಗಳ ಯಕ್ಷ – ನಾಟಕೋತ್ಸವದ 2ನೇ ದಿನದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಕಲೆಯನ್ನು ಆಸ್ವಾದಿಸುವ ಮನಸ್ಸುಗಳು ಹೆಚ್ಚಿದಂತೆ ಕಲಾವಿದರು ಹಾಗೂ ಕಲಾ ಸಂಸ್ಥೆಗಳು ಇನ್ನಷ್ಟು ಗಟ್ಟಿಗೊಳ್ಳುತ್ತವೆ ಎಂದರು.

ಇನ್ನರ್‌ವೀಲ್ ಕ್ಲಬ್ ಅಧ್ಯಕ್ಷೆ ಗುಲಾಬಿ ಮರವಂತೆ, ಸುರಭಿ ರಿ. ಬೈಂದೂರು ಅಧ್ಯಕ್ಷ ಆನಂದ ಮದ್ದೋಡಿ ಉಪಸ್ಥಿತರಿದ್ದರು.

ಯುಸ್ಕೋರ್ಡ್ ಟ್ರಸ್ಟ್ ಅಧ್ಯಕ್ಷ ಸುಧಾಕರ ಪಿ. ಬೈಂದೂರು ಸ್ವಾಗತಿಸಿದರು. ಕಾರ್ಯದರ್ಶಿ ಕೃಷ್ಣಮೂರ್ತಿ ಉಡುಪ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಬಳಿಕ ಧಾತ್ರಿ ಕಲಾ ಸಂಸ್ಥೆ ಸಿರಿಗೆರೆ ಬಳ್ಳಾರಿ ಅವರ ಪ್ರಸ್ತುತಿಯಲ್ಲಿ ಮೋಳಿಗೆ ಮಾರಯ್ಯ ನಾಟಕ ಪ್ರದರ್ಶನಗೊಂಡಿತು.

Exit mobile version