ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಡಾ. ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನ ಕೋಟ, ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ, ಕೋಟತಟ್ಟು ಗ್ರಾಮ ಪಂಚಾಯತ್ ವತಿಯಿಂದ ಕೋಟದ ಡಾ. ಶಿವರಾಮ ಕಾರಂತ ಥೀಮ್ ಪಾರ್ಕ್ ನಲ್ಲಿ ಡಿ. 28 ರಂದು ನೀಡಲಾಗುವ ಶಿವರಾಮ ಕಾರಂತ ಬಾಲ ಪುರಸ್ಕಾರಕ್ಕೆ ಕುಂದಾಪುರದ ಗುರುಕುಲ ಪಬ್ಲಿಕ್ ಶಾಲೆಯ ಏಳನೇ ತರಗತಿಯ ವಿದ್ಯಾರ್ಥಿನಿ ಸಾನಿಧ್ಯ ಸಂತೋಷ್ ನಾಯ್ಕ್ ಆಯ್ಕೆಯಾಗಿರುತ್ತಾರೆ.
ವಿದ್ಯಾರ್ಥಿನಿಯ ಈ ಸಾಧನೆಗೆ ಸಂಸ್ಥೆಯ ಆಡಳಿತ ಮಂಡಳಿ, ಪ್ರಾಂಶುಪಾಲರು, ಶಿಕ್ಷಕ ಮತ್ತು ಶಿಕ್ಷಕೇತರ ಸಿಬ್ಬಂದಿಗಳು ಶುಭ ಹಾರೈಸಿ, ಅಭಿನಂದಿಸಿದ್ದಾರೆ.