Site icon Kundapra.com ಕುಂದಾಪ್ರ ಡಾಟ್ ಕಾಂ

ಅಪರಾಧ ತಡೆ ಮಾಸಾಚರಣೆ ಪ್ರಯುಕ್ತ ನಡೆದ ಜನಜಾಗೃತಿ ಜಾಥಾದ ಸಮಾರೋಪ ಸಮಾರಂಭ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಗಂಗೊಳ್ಳಿ:
ಕರಾವಳಿ ಕಾವಲು ಪೊಲೀಸ್ ಠಾಣೆ ಗಂಗೊಳ್ಳಿ ಇದರ ವತಿಯಿಂದ ರೋಟರಿ ಕ್ಲಬ್ ಗಂಗೊಳ್ಳಿ ಇವರ ಸಹಯೋಗದೊಂದಿಗೆ ಅಪರಾಧ ತಡೆ ಮಾಸಾಚರಣೆ ಪ್ರಯುಕ್ತ ಗಂಗೊಳ್ಳಿಯ ಮುಖ್ಯ ಬೀದಿಯಲ್ಲಿ ಜನಜಾಗೃತಿ ಜಾಥಾ ಶನಿವಾರ ನಡೆಯಿತು.

ಗಂಗೊಳ್ಳಿಯ ಪೋಸ್ಟ್ ಆಫೀಸ್ ಬಳಿಯಿಂದ ಪ್ರಾರಂಭವಾದ ಜನಜಾಗೃತಿ ಜಾಥಾ ಮುಖ್ಯರಸ್ತೆ ಮೂಲಕ ಎಸ್. ವಿ. ಮಾದರಿ ಹಿರಿಯ ಪ್ರಾಥಮಿಕ ಶಾಲೆ ತನಕ ನಡೆಯಿತು.

ಜಾಥಾದಲ್ಲಿ ಕರಾವಳಿ ಕಾವಲು ಪೊಲೀಸ್ ಠಾಣೆ ಸಿಬ್ಬಂದಿಗಳು, ಕೆಎನ್‌ಡಿ ಸಿಬ್ಬಂದಿಗಳು, ಎಸ್.ವಿ. ಮಾದರಿ ಹಿರಿಯ ಪ್ರಾಥಮಿಕ ಶಾಲೆ, ಕೊಂಚಾಡಿ ರಾಧಾ ಶೆಣೈ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಗಂಗೊಳ್ಳಿ, ಉರ್ದು ಹಿರಿಯ ಪ್ರಾಥಮಿಕ ಶಾಲೆ ಗಂಗೊಳ್ಳಿ ಸರಕಾರಿ ಕಿರಿಯ ಪ್ರಾಥಮಿಕ ಕಿರಿಯ ಪ್ರಾಥಮಿಕ (ರಥಬೀದಿ) ಶಾಲೆಗಳ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ಎಸ್.ವಿ. ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಟಿ. ವಿಮಲಾ ವಿ.ಪೈ ಸಭಾಂಗಣದಲ್ಲಿ ನಡೆದ ಸಮಾರೋಪ ಸಮಾರಂಭದಲ್ಲಿ ಗಂಗೊಳ್ಳಿ ಕರಾವಳಿ ಕಾವಲು ಪೊಲೀಸ್ ಠಾಣೆ ಉಪನಿರೀಕ್ಷಕರಾದ ಸುಬ್ರಹ್ಮಣ್ಯ ಹರ್ಕೇರಿ, ಮುಕ್ತಬಾಯಿ, ಗಂಗೊಳ್ಳಿ ರೋಟರಿ ಕ್ಲಬ್ ಅಧ್ಯಕ್ಷೆ ಚಂದ್ರಕಲಾ ತಾಂಡೇಲ್, ಶಾಲೆಯ ಮುಖ್ಯ ಶಿಕ್ಷಕ ಜಿ. ವಿಶ್ವನಾಥ ಭಟ್, ಸಾಮಾಜಿಕ ಕಾರ್ಯಕರ್ತೆ ಫಿಲೋಮಿನಾ ಫೆರ್ನಾಂಡಿಸ್, ಎಎಸ್‌ಐ ಬಾಬು ಪೂಜಾರಿ, ಕರಾಟೆ ಗುರು ಅಶೋಕ್ ಕುಲಾಲ್ ಉಪಸ್ಥಿತರಿದ್ದರು.

ಮಕ್ಕಳಿಗೆ ಸುರಕ್ಷಣೆಯ ಕುರಿತಂತೆ ಕರಾಟೆ ಗುರು ಅಶೋಕ್ ಕುಲಾಲ್ ಅವರು ಪ್ರಾತ್ಯಕ್ಷಿಕೆ ನೀಡಿದರು ಮತ್ತು ಗಂಗೊಳ್ಳಿ ಆರೋಗ್ಯ ಕೇಂದ್ರ ಸಿ.ಎಚ್.ಒ ನಯನಾ ತಾಂಡೆಲ್ ಅವರು ಪ್ರಥಮ ಚಿಕಿತ್ಸೆ ಕುರಿತು ಮಾಹಿತಿ ನೀಡಿದರು.

ಪೊಲೀಸ್ ಸಿಬ್ಬಂದಿ ನಾಗರಾಜ್ ಖಾರ್ವಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

Exit mobile version