Kundapra.com ಕುಂದಾಪ್ರ ಡಾಟ್ ಕಾಂ

ಬ್ಯಾರೀಸ್ ಪಿಯು ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಪ್ರೇರಣೆ, ಜ್ಞಾಪಕಶಕ್ತಿ  ಮತ್ತು ಅಧ್ಯಯನ ಕೌಶಲ್ಯಗಳ ಕುರಿತು ಕಾರ್ಯಾಗಾರ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ಇಲ್ಲಿನ ಬ್ಯಾರೀಸ್ ಪಿಯು ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ  ಪ್ರೇರಣೆ, ಜ್ಞಾಪಕಶಕ್ತಿ  ಮತ್ತು ಅಧ್ಯಯನ ಕೌಶಲ್ಯಗಳ ಕುರಿತು ಕಾರ್ಯಾಗಾರ ಸೋಮವಾರದಂದು ನಡೆಯಿತು.

ಕಾರ್ಯಾಗಾರದ ಸಂಪನ್ಮೂಲ  ಬೆಂಗಳೂರಿನ ಸಿ.ಇ.ಒ ಮತ್ತು ಸಂಸ್ಥಾಪಕರಾದ ಅಮೀನ್ ಇ ಮುದಸ್ಸರ್ ಅವರು  ಆಗಮಿಸಿದ್ದರು. ಸಿಗ್ಮಾ ದ್ವಿತೀಯ ಪಿಯುಸಿ ತರಗತಿಗಳಿಗೆ  ಬಹುವಿಧದ ಜ್ಞಾಪಕಶಕ್ತಿಯ ತಂತ್ರಗಳನ್ನು ಮತ್ತು ವಿದ್ಯಾರ್ಥಿಗಳ ವ್ಯಕ್ತಿತ್ವ ಅಭಿವೃದ್ಧಿಗೆ ಪೂರಕವಾದ ಚಟುವಟಿಕೆಗಳನ್ನು ಪರಿಣಾಮಕಾರಿಯಾಗಿ ನಡೆಸಿದರು. ಈ ಸಂದರ್ಭದಲ್ಲಿ ಸಂಪನ್ಮೂಲ ವ್ಯಕ್ತಿಗಳು ಶಿಕ್ಷಕರು ಹಾಗೂ  ಉಪನ್ಯಾಸಕರಿಗೆ ಪುನಶ್ಚೇತನ ಶಿಬಿರವನ್ನು ನಡೆಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಹಾಜಿ ಕೆ.ಎಂ ಅಬ್ದುಲ್ ರೆಹಮಾನ್ ಬ್ಯಾರಿ ವಹಿಸಿಕೊಂಡಿದ್ದರು. ಟ್ರಸ್ಟಿಗಳಾದ

ಕಾರ್ಯಕ್ರಮದ ವೇದಿಕೆಯಲ್ಲಿ ಬ್ಯಾರೀಸ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಅಶ್ವಿನಿ ಶೆಟ್ಟಿ, ಉಪಪ್ರಾಂಶುಪಾಲೆ ಝಿಯಾನ,  ವಿಜ್ಞಾನ ವಿಭಾಗದ ಮುಖ್ಯಸ್ಥೆ ಡಾ. ಪೂರ್ಣಿಮಾ .ಟಿ, ಬ್ಯಾರೀಸ್ ಪದವಿ ಕಾಲೇಜಿನ ಪ್ರಾಂಶುಪಾಲೆ ಶಬೀನಾ ಹೆಚ್. ಉಪಸ್ಥಿತರಿದ್ದರು.

ಡಾ. ಆಸಿಫ್ ಬ್ಯಾರಿ ಪ್ರಸ್ತಾವಿಕವಾಗಿ ಮಾತನಾಡಿದರು. ಮನಃಶಾಸ್ತ್ರ ಉಪನ್ಯಾಸಕಿ ಲಾಮಿಸ್ ಲರೈಬ್ ಸಂಪನ್ಮೂಲ ವ್ಯಕ್ತಿಗಳನ್ನು ಸಭೆಗೆ ಪರಿಚರಿಸಿದರು. ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಝುನಿಯಾ ಕೌಸರ್ ವಂದಿಸಿ, ಆಯಿಷಾ ಬಹಿರಾ ಕಾರ್ಯಕ್ರಮ ನಿರೂಪಿಸಿದರು.  

Exit mobile version