Kundapra.com ಕುಂದಾಪ್ರ ಡಾಟ್ ಕಾಂ

ಪ್ರಯಾಣಿಕನಿಗೆ ಬಸ್ಸಿನಲ್ಲಿ ಹೃದಯಾಘಾತ. ಚಾಲಕನ ಸಮಯಪ್ರಜ್ಞೆಯಿಂದ ತಕ್ಷಣ ಆಸ್ಪತ್ರೆಗೆ ದಾಖಲು

ಕುಂದಾಪ್ರ ಡಾಟ್ ಕಾಂ‌ ಸುದ್ದಿ.
ಕುಂದಾಪುರ:
ಕುಂದಾಪುರದ ಹೊಸ ಬಸ್‌ ನಿಲ್ದಾಣದಿಂದ ಉಡುಪಿ ಕಡೆಗೆ ಹೊರಟಿದ್ದ ಬಸ್ಸಿನಲ್ಲಿ ಪ್ರಯಾಣಿಕರೋರ್ವರಿಗೆ ಹೃದಯಾಘಾತವಾಗಿದ್ದು, ಚಾಲಕನ ಸಮಯಪ್ರಜ್ಞೆಯಿಂದ ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಕುಂದಾಪುರದಿಂದ ಉಡುಪಿ ಕಡೆಗೆ ಹೊರಟಿದ್ದ ಸಮತಾ ಬಸ್ಸಿನಲ್ಲಿ ಕುಳಿತಿದ್ದ ಕೋಟ ನಿವಾಸಿ ವೆಂಕಟ್ ಎಂಬವರಿಗೆ ತೀವ್ರ ಪ್ರಮಾಣದ ಹೃದಯಾಘಾತದಿಂದ ತನ್ನ ಕಣ್ಣನ್ನು ಮುಚ್ಚಿದ್ದು ಮಾತನಾಡಿಸಿದಾಗ ಯಾವುದೇ ಪ್ರತಿಕ್ರಿಯೆ ನೀಡದೇ ಅಸ್ವಸ್ಥರಾಗಿದ್ದರು. ಇದನ್ನು ಗಮನಿಸಿದ ನಿರ್ವಾಹಕ ತಕ್ಷಣ ಈ ವಿಷಯವನ್ನು ಚಾಲಕ ರಿತೇಶ್ ಗೆ ತಿಳಿಸಿದ್ದು, ಆತ ಬಸ್ಸನ್ನು ನೇರಾ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಅಲ್ಲೇ ಇದ್ದ ರಿಕ್ಷಾ ಚಾಲಕರ ಸಹಾಯದಿಂದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ವೈದ್ಯರು ವೆಂಕಟ್ ಅವರಿಗೆ ಪ್ರಥಮ ಚಿಕಿತ್ಸೆ ನೀಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ತಕ್ಷಣ ಅಂಬುಲೆನ್ಸ್ ನಲ್ಲಿ ಮಣಿಪಾಲದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ. ಬಸ್ ನಿರ್ವಾಹಕ ಮತ್ತು ಚಾಲಕನ ಸಮಯಪ್ರಜ್ಞೆಗೆ ಸಾರ್ವಜನಿಕರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

Exit mobile version