Site icon Kundapra.com ಕುಂದಾಪ್ರ ಡಾಟ್ ಕಾಂ

ಡಾ. ಶಿವರಾಮ ಕಾರಂತ ಬಾಲ ಪುರಸ್ಕಾರಕ್ಕೆ ಜನತಾ ಪ.ಪೂ ಕಾಲೇಜಿನ ವಿದ್ಯಾರ್ಥಿನಿ ತನ್ವಿತಾ ಆಯ್ಕೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ಡಾ. ಶಿವರಾಮ ಕಾರಂತ ಪ್ರತಿಷ್ಠಾನ ರಿ.ಕೋಟ, ಡಾ. ಶಿವರಾಮ ಕಾರಂತ ಟ್ರಸ್ಟ್ ರಿ. ಉಡುಪಿ, ಕೋಟತಟ್ಟು ಗ್ರಾಮ ಪಂಚಾಯತ್ ವತಿಯಿಂದ, ಕೋಟದ ಡಾ. ಶಿವರಾಮ ಕಾರಂತ ಥೀಮ್ ಪಾರ್ಕ್‌ನಲ್ಲಿ ಕೊಡಮಾಡುವ ನಾಲ್ಕನೇ ವರ್ಷದ ಡಾ. ಶಿವರಾಮ ಕಾರಂತ ಬಾಲ ಪುರಸ್ಕಾರಕ್ಕೆ ಜನತಾ ಪದವಿಪೂರ್ವ ಕಾಲೇಜಿನ ಪ್ರಥಮ ಪಿ.ಯು.ಸಿ. ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ  ತನ್ವಿತಾ ವಿಶೇಷ ಪುರಸ್ಕಾರಕ್ಕೆ ಆಯ್ಕೆಯಾಗಿರುತ್ತಾರೆ.

ತನ್ವಿತಾ ಪ್ರೌಢ ಶಿಕ್ಷಣದ ಸಮಯದಲ್ಲಿ ಯೋಗ ಸ್ಪರ್ಧೆಯಲ್ಲಿ ರಾಷ್ಟ್ರ, ಅಂತರಾಷ್ಟ್ರೀಯ ಮಟ್ಟದ ಸ್ಪರ್ಧೆಗಳಲ್ಲಿ  ಭಾಗವಹಿಸಿ ಹಲವಾರು ಪ್ರಶಸ್ತಿಗಳನ್ನು ಪಡೆದಿರುತ್ತಾಳೆ. ಈ ಸಾಧನೆಯನ್ನು ಪರಿಗಣಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಡಾ. ಶಿವರಾಮ ಕಾರಂತ ಬಾಲ ಪುರಸ್ಕಾರವನ್ನು ಕೋಟದ ಡಾ. ಶಿವರಾಮ ಕಾರಂತ ಥೀಮ್ ಪಾರ್ಕ್‌ನಲ್ಲಿ ಡಿ.28 ರಂದು ಮಧ್ಯಾಹ್ನ 2.30 ಗಂಟೆಗೆ ಪ್ರದಾನ ಮಾಡಲಾಗುವುದೆಂದು ಡಾ. ಶಿವರಾಮ ಕಾರಂತ ಪ್ರತಿಷ್ಠಾನದ ಕಾರ್ಯಾಧ್ಯಕ್ಷರಾದ ಆನಂದ್ ಸಿ. ಕುಂದ‌ರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Exit mobile version