ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೋಟ: ಡಾ. ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನ ರಿ. ಕೋಟ, ಡಾ. ಶಿವರಾಮ ಕಾರಂತ ಟ್ರಸ್ಟ್ ರಿ. ಉಡುಪಿ, ಕೋಟತಟ್ಟು ಗ್ರಾಮ ಪಂಚಾಯತ್ ವತಿಯಿಂದ ಕೋಟ ಶಿವರಾಮ ಕಾರಂತ ಥೀಮ್ ಪಾರ್ಕ್ ನಲ್ಲಿ ಕೊಡ ಮಾಡುವ ನಾಲ್ಕನೇ ವರ್ಷದ ಶಿವರಾಮ ಕಾರಂತ ಬಾಲ ಪುರಸ್ಕಾರಕ್ಕೆ ಏಳಜಿತ್ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ 6ನೇ ತರಗತಿ ವಿದ್ಯಾರ್ಥಿನಿ ಸಾನ್ವಿ ವಿ.ಎಸ್. ವಿಶೇಷ ಪುರಸ್ಕಾರಕ್ಕೆ ಆಯ್ಕೆಯಾಗಿರುತ್ತಾರೆ.
ಈಕೆ ರಾಜ್ಯ ಮತ್ತು ಜಿಲ್ಲಾಮಟ್ಟದ ಹಲವು ಸ್ಪರ್ಧೆಗಳಲ್ಲಿ ಭಾಗವಹಿಸಿ ಪ್ರಶಸ್ತಿ ಪಡೆದಿರುತ್ತಾಳೆ. ಬೈಂದೂರು ಸುರಭಿ ಕಲಾ ಸಂಸ್ಥೆಯ ವಿದ್ಯಾರ್ಥಿನಿಯಾಗಿದ್ದು ಮಕ್ಕಳ ನಾಟಕ, ನೃತ್ಯ, ಹಾಗೂ ಯಕ್ಷಗಾನದಲ್ಲಿ ರಾಜ್ಯಮಟ್ಟದಲ್ಲಿ ಹಲವಾರು ಕಾರ್ಯಕ್ರಮಗಳನ್ನು ನೀಡಿರುತ್ತಾಳೆ.
ಸಾನ್ವಿ ಏಳಜಿತದ ವಸಂತ ಗೌಡ ಮತ್ತು ಶಾಂತಿ ಅವರ ಪುತ್ರಿ. ಡಾ. ಶಿವರಾಮ ಕಾರಂತ ಬಾಲ ಪುರಸ್ಕಾರವನ್ನು ಕೋಟದ ಡಾ. ಶಿವರಾಮ ಕಾರಂತ ಥೀಮ್ ಪಾರ್ಕ್ ನಲ್ಲಿ ಡಿ. 28ರಂದು ಮಧ್ಯಾಹ್ನ 2:30ಕ್ಕೆ ಪ್ರಧಾನ ಮಾಡಲಾಗುತ್ತದೆ.