Site icon Kundapra.com ಕುಂದಾಪ್ರ ಡಾಟ್ ಕಾಂ

ಉಡುಪಿ: ಪೂರ್ವಭಾವಿ ಮರುಪರೀಕ್ಷೆಗೆ ನಿಷೇಧಾಜ್ಞೆ ಜಾರಿ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಉಡುಪಿ:
ಕರ್ನಾಟಕ ಲೋಕಸೇವಾ ಆಯೋಗದ ವತಿಯಿಂದ 2023-24 ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ಸ್ ಗ್ರೂಪ್ ಎ ಮತ್ತು ಬಿ ವೃಂದದ ಒಟ್ಟು 384 ಹುದ್ದೆಗಳ ಪೂರ್ವಭಾವಿ ಪರೀಕ್ಷೆಗಳು ಡಿಸೆಂಬರ್ 29 ರಂದು ಜಿಲ್ಲೆಯಲ್ಲಿ ನಿಗಧಿಪಡಿಸಿರುವ ಒಟ್ಟು 05 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ.

ಪರೀಕ್ಷೆಗಳು ಸುಸೂತ್ರವಾಗಿ ಮತ್ತು ದೋಷರಹಿತವಾಗಿ ನಡೆಸಲು ಹಾಗೂ ನಡೆಯಬಹುದಾದ ಎಲ್ಲಾ ರೀತಿಯ ಅವ್ಯವಹಾರಗಳನ್ನು ತಡೆಗಟ್ಟುವ ಸಲುವಾಗಿ ನಿಗದಿಪಡಿಸಿದ ಎಲ್ಲಾ ಪರೀಕ್ಷಾ ಕೇಂದ್ರಗಳ ಸುತ್ತಲೂ ಜೆರಾಕ್ಸ್ ಅಂಗಡಿಗಳನ್ನು ಮುಚ್ಚಲು, ಸುತ್ತಲೂ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ, ಭಾರತೀಯ ನಾಗರೀಕ ಸುರಕ್ಷಾ ಸಂಹಿತೆ 2023 ರ ಕಲಂ 163 ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾ ದಂಡಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಆದೇಶಿಸಿರುತ್ತಾರೆ.

Exit mobile version