Kundapra.com ಕುಂದಾಪ್ರ ಡಾಟ್ ಕಾಂ

ಕುಂದಾಪುರ: ಆಕಸ್ಮಿಕವಾಗಿ ಬಾವಿಗೆ ಬಿದ್ದು ಯುವತಿ ಸಾವು 

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಕಾಳಾವರ ಗ್ರಾಮದ ಸಳ್ವಾಡಿಯ ಉದಯ ಅವರ ಪುತ್ರಿ ಮುಗ್ಧ (25) ಅವರು ಆಕಸ್ಮಿಕವಾಗಿ ಬಾವಿಗೆ ಬಿದ್ದು ಸಾವನ್ನಪ್ಪಿದ ಘಟನೆ ಡಿ. 25ರಂದು ಕಾಳಾವರ ಗ್ರಾಮದ ಸಳ್ವಾಡಿಯಲ್ಲಿ ನಡೆದಿದೆ.

ಈಕೆ ಮಂಗಳೂರಿನ ಖಾಸಗಿ ಕಂಪೆನಿಯಲ್ಲಿ ಕೆಲಸ ಮಾಡಿಕೊಂಡಿದ್ದು, ಕ್ರಿಸ್ಮಸ್‌ ರಜೆ ಹಿನ್ನೆಲೆಯಲ್ಲಿ ಡಿ. 25ರಂದು ಮನೆಗೆ ಬಂದಿದ್ದರು. ರಾತ್ರಿ 10.30ರ ಸುಮಾರಿಗೆ ಮನೆಯ ಬಾವಿ ಬಳಿಗೆ ಹೋಗಿದ್ದಾಗ ಆಕಸ್ಮಿಕವಾಗಿ ಬಿದ್ದರು ಎನ್ನಲಾಗಿದೆ.

ಡಿ. 26ರ ಬೆಳಿಗ್ಗೆ ಮೃತದೇಹವನ್ನು ಸ್ಥಳೀಯರು, ಅಗ್ನಿಶಾಮಕದಳದವರ ಸಹಾಯದಿಂದ ಶವವನ್ನು ಮೇಲಕ್ಕೆತ್ತಲಾಯಿತು.

ಈ ಬಗ್ಗೆ ಕುಂದಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Exit mobile version