Kundapra.com ಕುಂದಾಪ್ರ ಡಾಟ್ ಕಾಂ

ಸಿದ್ದಾಪುರ: ಬೈಕಿಗೆ ಕಾರು ಡಿಕ್ಕಿಯಾಗಿ ಸವಾರರು ಗಂಭೀರ ಗಾಯ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ತಾಲೂಕಿನ ಹಳ್ಳಿಹೊಳೆ ಗ್ರಾಮದ ರವೀಂದ್ರ (40) ಅವರು ಗೋಪಾಲ ಅವರ ಬೈಕಿನಲ್ಲಿ ಗೋಪಾಲ ಅವರನ್ನು ಸಹ ಸವಾರನ್ನಾಗಿ ಕುಳ್ಳಿರಿಸಿಕೊಂಡು ಡಿ. 25ರಂದು ಅಮಾಸೆಬೈಲುನಿಂದ ಸಿದ್ದಾಪುರ ಬರುತ್ತಿದ್ದರು.

ಸಿದ್ದಾಪುರ ಗ್ರಾಮದ ಕಾರಿಮಕ್ಕಿ ಹೈಗುಳಿ ದೈವಸ್ಥಾನ ಬಳಿ ಎದುರು ಕಡೆಯಿಂದ ಅತೀ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿಯ ಪರಿಣಾಮ ಇಬ್ಬರು ಗಂಭೀರವಾಗಿ ಗಾಯಗೊಂಡರು. ಸ್ಥಳೀಯ ಸಹಕಾರದಿಂದ ಕೋಟೇಶ್ವರ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.

ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗದೆ.

Exit mobile version