Kundapra.com ಕುಂದಾಪ್ರ ಡಾಟ್ ಕಾಂ

ವಂಡ್ಸೆ ಗ್ರಾಮ ಪಂಚಾಯಿತಿಗೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳ ಭೇಟಿ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಭಾರತ ಸರಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಕೇಂದ್ರೀಯ ಕ್ಷಯರೋಗ ವಿಭಾಗದ ಮುಖ್ಯ ಸಹಾಯಕ ನಿರ್ದೇಶಕರಾದ ಡಾ. ರಘುರಾಮ್, ವಿಶ್ವ ಆರೋಗ್ಯ ಸಂಸ್ಥೆಯ ರಾಷ್ಟ್ರೀಯ ಸಲಹೆಗಾರರಾದ ಡಾ. ಮ್ರಿಜೆನ್ ದೆಖ, ಕೇಂದ್ರೀಯ ಕ್ಷಯ ರೋಗ ವಿಭಾಗದ ತಾಂತ್ರಿಕ ಅಧಿಕಾರಿ ಶಶಾಂಕ್ ಮಾಳವಿಯ ಮತ್ತು ಕೆಎಚ್ಪಿ. ಟಿ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮೋಹನ್ ಎಚ್. ಎಚ್ ಇವರುಗಳು ಡಿ. 27ರಂದು ವಂಡ್ಸೆ ಗ್ರಾಮ ಪಂಚಾಯತ್ಗೆ ಭೇಟಿ ನೀಡಿದರು.

ಸಮಗ್ರ ಆರೋಗ್ಯ, ಉಪಶಾಮಕ ಆರೈಕೆ  ಹಾಗೂ ಗ್ರಾಮ ಪಂಚಾಯತ್‍ನ ವಿವಿಧ ಯೋಜನೆಗಳ ಬಗ್ಗೆ ಚರ್ಚಿಸಿ, ಮಾಹಿತಿ ಪಡೆದುಕೊಂಡರು.

ಈ ಸಂದರ್ಭದಲ್ಲಿ ಕೆಎಚ್ಪಿ.ಟಿಯ ಡಾ. ಸ್ವರೂಪ್, ಅನ್ನಾ ಫರ್ನಾಂಡೀಸ್, ಗ್ರಾಮ ಪಂಚಾಯತ್ ಅಧ್ಯಕ್ಷರಾದ ಗೀತಾ ಅವಿನಾಶ್, ಉಪಾಧ್ಯಕ್ಷರಾದ ಗೋವರ್ಧನ ಜೋಗಿ, ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ, ಹಾಲಿ ಸದಸ್ಯರಾದ  ಉದಯ ಕುಮಾರ ಶೆಟ್ಟಿ, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪೂರ್ಣಿಮಾ, ಕಾರ್ಯದರ್ಶಿ ಸುರೇಶ್ ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.

ಗ್ರಾ.ಪಂ. ಮಾಜಿ ಅಧ್ಯಕ್ಷ ಉದಯ ಕುಮಾರ್ ಶೆಟ್ಟಿ ಅವರು ವಂಡ್ಸೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸಿದ್ಧವಾಗುತ್ತಿರುವ ಸಮಗ್ರ ಆರೋಗ್ಯ, ಉಪಶಾಮಕ ಆರೈಕೆಯ ಬಗ್ಗೆ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಭಾರತ ಸರಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಅಧಿಕಾರಿಗಳನ್ನು ಪಂಚಾಯತ್ ವತಿಯಿಂದ ಗೌರವಿಸಲಾಯಿತು.

Exit mobile version