Site icon Kundapra.com ಕುಂದಾಪ್ರ ಡಾಟ್ ಕಾಂ

ಹೆಮ್ಮಾಡಿ: ಲಾರಿಗಳ ಡಿಕ್ಕಿಯಾಗಿ ಚಾಲಕನಿಗೆ ಗಂಭೀರ ಗಾಯ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ತಾಲೂಕಿನ ಹೆಮ್ಮಾಡಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕುಂದಾಪುರ ಕಡೆಯಿಂದ ಬೈಂದೂರು ಕಡೆಗೆ ಸಾಗುತ್ತಿದ್ದ ಲಾರಿಗೆ ಅದೆ ಮಾರ್ಗದಲ್ಲಿ ಸಾಗುತ್ತಿದ್ದ ಇನ್ನೊಂದು ಲಾರಿ ಮೂವತ್ತು ಮುಡಿ ಸೇತುವೆ ಬಳಿ ಹಿಂಬದಿಗೆ ಡಿಕ್ಕಿ ಹೊಡೆದ ಪರಿಣಾಮ ಲಾರಿ ಚಾಲಕ ಗಂಭೀರ ಸ್ವರೂಪದ ಗಾಯದೊಂದಿಗೆ ಆಸ್ಪತ್ರೆಗೆ ದಾಖಲಾಗಿದ್ದ ಘಟನೆ ಶುಕ್ರವಾರ ನಡೆದಿದೆ.

ಆಂಬ್ಯುಲೆನ್ಸ್ ಇಬ್ರಾಹಿಂ ಗಂಗೊಳ್ಳಿ ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಲು ಸಹಕರಿಸಿದರು. ಕುಂದಾಪುರ ಠಾಣೆ ಪೊಲೀಸ್ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ ಮಹಜರು ನಡೆಸಿದರು.

Exit mobile version