Kundapra.com ಕುಂದಾಪ್ರ ಡಾಟ್ ಕಾಂ

ಕುಂದಾಪುರ: ಅಪರಿಚಿತ ವ್ಯಕ್ತಿ ಸಾವು

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಇಲ್ಲಿನ ಗಾಂಧಿ ಮೈದಾನದ ಎದುರು ಸರ್ವಿಸ್ ರಸ್ತೆಯ ಚರಂಡಿಯ ಮೇಲ್‍ ಹಾಸಿನ ಮೇಲೆ ಅಪರಿಚಿತ ವ್ಯಕ್ತಿ ಮೃತಪಟ್ಟಿದ್ದಾರೆ.

ಅವರು ಡಿ. 27ರಂದು ತೀವ್ರ ಅಸ್ವಸ್ಥಗೊಂಡಿದ್ದು ಸ್ಥಳೀಯರು ಚಿಕಿತ್ಸೆ ಬಗ್ಗೆ ಉಡುಪಿ ಅಜ್ಜರಕಾಡು ಆಸ್ಪತ್ರೆಗೆ ದಾಖಲಿಸಿದ್ದರೂ ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ಮೃತ ಪಟ್ಟಿದ್ದಾರೆ.

ಈ ಬಗ್ಗೆ ಕುಂದಾಪುರ ಪೋಲೀಸ್‍ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Exit mobile version