Kundapra.com ಕುಂದಾಪ್ರ ಡಾಟ್ ಕಾಂ

ಆನೆಗುಡ್ಡೆ ಶ್ರೀವಿನಾಯಕ ದೇವಸ್ಥಾನಕ್ಕೆ ನಟ, ನಿರ್ದೇಶಕ ಉಪೇಂದ್ರ ಭೇಟಿ 

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ತಾಲೂಕಿನ ಕುಂಭಾಶಿ ಆನೆಗುಡ್ಡೆ ಶ್ರೀವಿನಾಯಕ ದೇವಸ್ಥಾನಕ್ಕೆ ಖ್ಯಾತ ಚಿತ್ರ ನಟ, ನಿರ್ದೇಶಕ ಉಪೇಂದ್ರ ಹಾಗೂ ಮತ್ತಿತರರು ದೇವರ ದರ್ಶನಕ್ಕೆ ಆಗಮಿಸಿದ್ದರು.

ಶ್ರೀ ದೇವಸ್ಥಾನದ ವತಿಯಿಂದ ಅವರನ್ನು ಸತ್ಕರಿಸಲಾಯಿತು. ಈ ಸಂದರ್ಭದಲ್ಲಿ ದೇವಾಲಯದ ಆಡಳಿತ ಮೊಕ್ತೇಸರ ಶ್ರೀರಮಣ ಉಪಾಧ್ಯಾಯ, ಹಿರಿಯ ಅರ್ಚಕ ಹಾಗೂ ಮಾಜಿ ಮೊಕ್ತೇಸರರಾದ ಕೆ. ಸೂರ್ಯನಾರಾಯಣ ಉಪಾಧ್ಯಾಯರು, ಮೊಕ್ತೇಸರ ನಿರಂಜನ ಉಪಾಧ್ಯಾಯರು ಪರ್ಯಾಯ ಅರ್ಚಕರಾದ ಕೃಷ್ಣಾನಂದ ಉಪಾಧ್ಯಾಯರು, ಅರ್ಚಕ ಮಂಡಳಿ ಸದಸ್ಯರು, ದೇವಳದ ವ್ಯವಸ್ಥಾಪಕರು ಹಾಗು ಸಿಬ್ಬಂದಿ ಉಪಸ್ಥಿತರಿದ್ದರು.

Exit mobile version