Kundapra.com ಕುಂದಾಪ್ರ ಡಾಟ್ ಕಾಂ

ಮೊಳಹಳ್ಳಿ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ ಎಂ. ಮಹೇಶ್ ಹೆಗ್ಡೆ ಮೊಳಹಳ್ಳಿ ಆಯ್ಕೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ತಾಲೂಕಿನ ಮೊಳಹಳ್ಳಿ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ ಎಂ.ಮಹೇಶ್ ಹೆಗ್ಡೆ ಮೊಳಹಳ್ಳಿ, ಉಪಾಧ್ಯಕ್ಷರಾಗಿ ಜಗನ್ನಾಥ ಶೆಟ್ಟಿ ಚಿಟ್ಟೆಬೈಲು ಆಯ್ಕೆಯಾಗಿದ್ದಾರೆ.

ಜ.೬ರಂದು ನೂತನ ಅಧ್ಯಕ್ಷರು, ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಯಿತು. ಈ ಸಂದರ್ಭ ಸಂಘದ ನಿರ್ದೇಶಕರಾದ ಎಚ್.ಹರಿಪ್ರಸಾದ್ ಶೆಟ್ಟಿ, ಚಂದ್ರಶೇಖರ ಶೆಟ್ಟಿ, ಲವಕರ ಶೆಟ್ಟಿ, ಅನಿಲ್ ಕುಮಾರ್ ಶೆಟ್ಟಿ, ಶ್ರೀಮತಿ ಇಂದಿರಾ ಯು ಶೆಟ್ಟಿ, ಶ್ರೀಮತಿ ವಾಣಿ ಆ‌ರ್ ಶೆಟ್ಟಿ, ಶ್ರೀಮತಿ ಚೈತ್ರ ಅಡಪ, ದಿನೇಶ ಮೊಗವೀರ, ಉಮೇಶ ಶೆಟ್ಟಿ, ಗಣೇಶ, ಗಿರೀಶ್, ಉದ್ಯಮಿ ಎಂ. ದಿನೇಶ ಹೆಗ್ಡೆ ಮೊಳಹಳ್ಳಿ, ಹೊಂಬಾಡಿ ಮಂಡಾಡಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಅರುಣ್ ಕುಮಾರ್ ಹೆಗ್ಡೆ, ಹಾರ್ದಳ್ಳಿ ಮಂಡಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷೆ ದೀಪಾ, ಜಿಲ್ಲಾ ಬ್ಯಾಂಕ್ ಪ್ರತಿನಿಧಿಗಳಾದ ಚಂದ್ರಶೇಖರ ಶೆಟ್ಟಿ, ಸಂದೀಪ್ ಶೆಟ್ಟಿ ಉಪಸ್ಥಿತರಿದ್ದರು.

ಇದನ್ನೂ ಓದಿ ► ಮೊಳಹಳ್ಳಿ ವ್ಯವಸಾಯ ಸೇವಾ ಸಹಕಾರಿ ಸಂಘದ ಚುನಾವಣೆ: ಕಾಂಗ್ರೆಸ್‌ ಬೆಂಬಲಿತ ಗುಂಪಿಗೆ ಜಯ – https://kundapraa.com/?p=80665 .

ಆಯ್ಕೆ ಪ್ರಕ್ರಿಯೆಯನ್ನು ಚುನಾವಣಾ ಅಧಿಕಾರಿ ಸುನೀಲ್ ಕುಮಾರ್ ಸಿ,ಎಂ. ಚುನಾವಣೆಯನ್ನು ನಡೆಸಿಕೊಟ್ಟರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪಾರ್ವತಿ ಎಂ ವಂದಿಸಿದರು.

Exit mobile version