Kundapra.com ಕುಂದಾಪ್ರ ಡಾಟ್ ಕಾಂ

ಗಂಗೊಳ್ಳಿ: ಕನ್ನಡ ಭಾಷಾ ಒಲಿಂಪಿಯಾಡ್ ಪರೀಕ್ಷೆಯಲ್ಲಿ ಆರಾಧ್ಯ ಆರ್. ದ್ವಿತೀಯ ಸ್ಥಾನ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಗಂಗೊಳ್ಳಿ:
ಆಲೂರು ವೆಂಕಟರಾವ್ ಭಾಷಾ ಕೌಶಲ್ಯ ಕೇಂದ್ರ ಮೈಸೂರು, ಜಿಲ್ಲಾ ಶಿಕ್ಷಣ ತರಬೇತಿ ಸಂಸ್ಥೆ ಉಡುಪಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಕುಂದಾಪುರ ಇದರ ವತಿಯಿಂದ ನಡೆದ ಕುಂದಾಪುರ ತಾಲೂಕು ಮಟ್ಟದ ಕನ್ನಡ ಭಾಷಾ ಒಲಿಂಪಿಯಾಡ್ ಪರೀಕ್ಷೆಯಲ್ಲಿ ಗಂಗೊಳ್ಳಿ ಖಾರ್ವಿಕೇರಿಯ ಕೊಂಚಾಡಿ ರಾಧಾ ಶೆಣೈ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ 5ನೇ ತರಗತಿಯ ವಿದ್ಯಾರ್ಥಿಗಳಾದ ಆರಾಧ್ಯ ಆರ್. ದ್ವಿತೀಯ ಸ್ಥಾನವನ್ನು ಮತ್ತು ಪ್ರಖ್ಯಾತ್‌ ತೃತೀಯ ಸ್ಥಾನ ಪಡೆದಿದ್ದಾರೆ.

ಅವರಿಗೆ ಶಾಲಾ ಶಿಕ್ಷಕರು ಮತ್ತು ಶಾಲಾ ಅಭಿವೃದ್ಧಿ ಮಂಡಳಿಯವರು ಅಭಿನಂದನೆ ಸಲ್ಲಿಸಿದ್ದಾರೆ.

Exit mobile version