Kundapra.com ಕುಂದಾಪ್ರ ಡಾಟ್ ಕಾಂ

ಕುಂದಾಪುರ: ನಾವುಂದ ಸರಕಾರಿ ಪದವಿಪೂರ್ವ ಕಾಲೇಜು ವಾರ್ಷಿಕೋತ್ಸವ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ಇಲ್ಲಿನ ನಾವುಂದ ಸರಕಾರಿ ಪದವಿಪೂರ್ವ ಕಾಲೇಜಿನ ವಾರ್ಷಿಕೋತ್ಸವವು ಇತ್ತೀಚಿಗೆ ನೆರವೇರಿತು.

ಬೈಂದೂರು ವಿಧಾನಸಭಾ ಶಾಸಕರಾದ ಗುರುರಾಜ್ ಶೆಟ್ಟಿ ಗಂಟಿಹೊಳೆ ಅವರು ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ನಾವುಂದ ಗ್ರಾಮ ಪಂಚಾಯತ್ ಅಧ್ಯಕ್ಷರಾದ ನರಸಿಂಹ ದೇವಾಡಿಗ ಅವರು ಅಧ್ಯಕ್ಷತೆ ವಹಿಸಿದರು.

ನಾವುಂದ ಗ್ರಾಮ ಪಂಚಾಯತ್ ಸದಸ್ಯರಾದ ಜಾನಕಿ ಮೊಗವೀರ ಮತ್ತು ರಾಮ ಪೂಜಾರಿ ಅವರು ಅತಿಥಿಗಳಾಗಿ ಆಗಮಿಸಿದ್ದರು. ಕಾಲೇಜು ಪ್ರಾಂಶುಪಾಲರಾದ ಸುಜಾತಾ ಎಂ., ಉಪಪ್ರಾಂಶುಪಾಲಾರದ ಶಶಿಕಲಾ ನಾಯ್ಕ್, ಕಾಲೇಜು ಅಭಿವೃದ್ಧಿ ಸಮಿತಿಯ ಕಾರ್ಯಧ್ಯಕ್ಷರಾದ ಪ್ರವೀಣ್ ಪೂಜಾರಿ, ಎಸ್. ಡಿ. ಎಂ. ಸಿ. ಅಧ್ಯಕ್ಷರಾದ ಸತೀಶ್ ಚಂದನ್  ಉಪಸ್ಥಿತರಿದ್ದರು.

ಗಣಿತ ಅಧ್ಯಾಪಕಿಯಾದ ಮುಕ್ತಾ ಅವರು ಸ್ವಾಗತಿಸಿದರು. ಗಣಿತ ಉಪನ್ಯಾಸಕಿಯಾದ ಸಾವಿತ್ರಿ ಎಸ್. ಅವರು ಧನ್ಯವಾದ ಸಮರ್ಪಿಸಿದರು. ಇತಿಹಾಸ ಉಪನ್ಯಾಸಕರಾದ ಗಣೇಶ ಎಂ. ಮತ್ತು ಅಧ್ಯಾಪಕರಾದ ಕರುಣಾಕರ್ ಶೆಟ್ಟಿ ಅವರು ಕಾರ್ಯಕ್ರಮವನ್ನು ನಿರೂಪಿಸಿದರು.

Exit mobile version