Site icon Kundapra.com ಕುಂದಾಪ್ರ ಡಾಟ್ ಕಾಂ

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ: ಕ್ಯಾಲೆಂಡರ್ ಬಿಡುಗಡೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು:
ಇಲ್ಲಿನ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಇದರ ವತಿಯಿಂದ 2025ರ ಕ್ಯಾಲೆಂಡರ್ ಅನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ನಾಗೇಶ್ ನಾಯಕ್ ಹಾಗೂ ಶಿಕ್ಷಕರ ಸಂಘದ ಅಧ್ಯಕ್ಷರು, ಬೈಂದೂರು ತಾಲೂಕು ನೌಕರ ಸಂಘದ ಅಧ್ಯಕ್ಷರಾದ ಶೇಕರ್ ಜಂಟಿಯಾಗಿ ಬಿಡುಗಡೆಗೊಳಿಸಿದರು.

ಕಾರ್ಯಕ್ರಮದಲ್ಲಿ ಕ್ಷೇತ್ರ ಸಮನ್ವಯಾಧಿಕಾರಿ ಪ್ರದೀಪ್ ಕುಮಾರ್ ಶೆಟ್ಟಿ, ನಿವೃತ್ತ ಶಿಕ್ಷಕರಾದ ಆನಂದ ಗಾಣಿಗ, ಶಿಕ್ಷಣ ಸಂಯೋಜಕರಾದ ಚಂದ್ರ ದೇವಡಿಗ, ಸತ್ಯನ ಕೊಡೇರಿ, ಯೋಗೀಶ್, ಶಾಲಾ ಮುಖ್ಯೋಪಾಧ್ಯಾಯರಾದ ಜನಾರ್ಧನ್ ದೇವಾಡಿಗ, ಬಿ. ಆರ್. ಪಿ. ಮಂಜುನಾಥ ದೇವಾಡಿಗ, ಸಂಘದ ಖಜಾಂಚಿ ಅಚ್ಚುತ ಬಿಲ್ಲವ, ಗಣೇಶ್ ಪೂಜಾರಿ,  ಸಿಆರ್‌ಪಿ ಲಕ್ಷ್ಮಿ, ಬಿ. ರಾಮನಾಥ ಮೇಸ್ತ ಉಪಸ್ಥಿತರಿದ್ದರು.

ಸಂಘದ ಪ್ರಧಾನ ಕಾರ್ಯದರ್ಶಿ ಗಣಪತಿ ಹೋಬಳಿದಾರ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಬಿಐಆರ್‌ಟಿ ನಾಗರತ್ನ ಸರ್ವರನ್ನು ಸ್ವಾಗತಿಸಿದರು. ಸಮೂಹ ಸಂಪನ್ಮೂಲ ವ್ಯಕ್ತಿ ಗಣೇಶ್ ಪೂಜಾರಿ ಧನ್ಯವಾದ ಸಲ್ಲಿಸಿದರು. ಕ್ಷೇತ್ರ ಸಂಪನ್ಮೂಲ ವ್ಯಕ್ತಿ ರಾಮಕೃಷ್ಣ ದೇವಾಡಿಗ ಕಾರ್ಯಕ್ರಮ ನಿರ್ವಹಿಸಿದರು. ಬೈಂದೂರು ಹಾಗೂ ಕಂಬದಕೋಣೆ ಸಂಯೋಜಕರ ಕೇಂದ್ರದ ಮುಖ್ಯ ಶಿಕ್ಷಕರಿಗೆ ಕ್ಯಾಲೆಂಡರನ್ನು ವಿತರಿಸಲಾಯಿತು.

Exit mobile version