Kundapra.com ಕುಂದಾಪ್ರ ಡಾಟ್ ಕಾಂ

ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ವಿದ್ಯಾರ್ಥಿ ಸಚಿನ್ ಆಚಾರ್‌ ಗಣರಾಜ್ಯೋತ್ಸವ ಪೆರೇಡ್‌ಗೆ ಆಯ್ಕೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂ ಸೇವಕ ಕುಂಭಾಶಿಯ ಶ್ರೀಧರ್ ಆಚಾರ್ ಮತ್ತು ಹೇಮಲತಾ ಅವರ ಪುತ್ರನಾದ ಸಚಿನ್ ಆಚಾರ್, ದ್ವಿತೀಯ ಬಿ.ಸಿ.ಎ. (ಬಿ) ಅವರು ಬೆಂಗಳೂರಿನಲ್ಲಿ ನಡೆಯಲಿರುವ ರಾಜ್ಯ ಗಣರಾಜ್ಯೋತ್ಸವ ಪಥಸಂಚಲನದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯವನ್ನು ಪ್ರತಿನಿಧಿಸಲಿದ್ದಾರೆ.

ಅವರಿಗೆಸಂಸ್ಥೆಯ ಆಡಳಿತ ಮಂಡಳಿಯ ಅಧ್ಯಕ್ಷರಾದ ಬಿ. ಎಮ್. ಸುಕುಮಾರ ಶೆಟ್ಟಿ,  ಕಾಲೇಜಿನ ಪ್ರಾಂಶುಪಾಲರಾದ ಕೆ. ಉಮೇಶ್ ಶೆಟ್ಟಿ, ಎನ್.ಎಸ್.ಎಸ್. ಕಾರ್ಯಕ್ರಮಾಧಿಕಾರಿಗಳಾದ ಡಾ. ಚೇತನ್ ಶೆಟ್ಟಿ ಕೋವಾಡಿ ಹಾಗೂ ದೀಪಾ ಪೂಜಾರಿ ಅವರು ಅಭಿನಂದಿಸಿದ್ದಾರೆ. 

Exit mobile version