Site icon Kundapra.com ಕುಂದಾಪ್ರ ಡಾಟ್ ಕಾಂ

ಸಿಎಮ್‌ಎ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಉತ್ಕೃಷ್ಟ ಸಾಧನೆಗೈದ ಬಿ.ಬಿ. ಹೆಗ್ಡೆ ಕಾಲೇಜಿನ ವಿದ್ಯಾರ್ಥಿಗಳು

ಕುಂದಾಪ್ರ ಡಾಟ್‌ ಕಾಂ ಸುದ್ದಿ. 
ಕುಂದಾಪುರ:
ಇನ್‌ಸ್ಟಿಟ್ಯೂಟ್ ಆಫ್ ಕಾಸ್ಟ್ ಅಕೌಂಟೆಂಟ್ಸ್ ಆಫ್ ಇಂಡಿಯಾ ನಡೆಸುವ ಪ್ರಾರಂಭಿಕ ಹಂತದ ಸಿಎಮ್‌ಎ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ  ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಪ್ರಥಮ ಹಂತದಲ್ಲಿಯೇ ಮಹೋನ್ನತ ಸಾಧನೆಗೈದಿದ್ದಾರೆ.

ವಿದ್ಯಾರ್ಥಿಗಳಾದ ವೈಷ್ಣವಿ ಹಾಗೂ ಕಾರ್ತಿಕ್ ಕೆ. ಬಿಲ್ಲವ ಅವರು ಸಿ.ಎಂ.ಎ. ಇಂಟರ್‌ಮೀಡಿಯೇಟ್ ಪ್ರೋಗ್ರಾಮ್‌ಗೆ ಅರ್ಹತೆ ಪಡೆದಿದ್ದಾರೆ.

ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಹಾಗೂ ವೀ ರೀಚ್ ಸಂಸ್ಥೆಯ ನುರಿತ ತರಬೇತುದಾರರಿಂದ  ವಿದ್ಯಾರ್ಥಿಗಳು  ತರಬೇತಿ ಹಾಗೂ ಮಾರ್ಗದರ್ಶನ ಪಡೆದು ಈ  ಸಾಧನೆಗೈದಿದ್ದಾರೆ.

ಅವರಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ/ಬೋಧಕೇತರ ವೃಂದದವರು ಅಭಿನಂದಿಸಿದ್ದಾರೆ.

Exit mobile version