Site icon Kundapra.com ಕುಂದಾಪ್ರ ಡಾಟ್ ಕಾಂ

ಕತಾರಿನಲ್ಲಿ ಸಿಗ್ದಾ ಪ್ರಶಸ್ತಿ ಪಡೆದ ಕನ್ನಡಿಗ ಸುಬ್ರಹ್ಮಣ್ಯ ಹೆಬ್ಬಾಗಿಲು

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ಕತಾರಿನಲ್ಲಿರುವ ದೋಹಾದಲ್ಲಿ ನಡೆದ ‘ದಕ್ಷಿಣ ಭಾರತ ಪ್ರತಿಭಾನ್ವೇಷಣೆಯ ಪ್ರಶಸ್ತಿ (SIGTA) ಪ್ರದಾನʼ ಸಮಾರಂಭ 2024ರಲ್ಲಿ ಕರ್ನಾಟಕದ ಬೈಂದೂರು ಮೂಲದವರಾದ ಕತಾರಿನ ಭಾರತೀಯ ಸಾಂಸ್ಕೃತಿಕ ಕೇಂದ್ರದ ಉಪಾಧ್ಯಕ್ಷರಾದ ಸುಬ್ರಹ್ಮಣ್ಯ ಹೆಬ್ಬಾಗಿಲು ಅವರಿಗೆ ಸಮುದಾಯ ಸಮರ್ಥ ಸೇವಕ ಪ್ರಶಸ್ತಿಯನ್ನು ಇತ್ತೀಚಿಗೆ ನೀಡಿ ಗೌರವಿಸಲಾಯಿತು.

ಈ ಪ್ರಶಸ್ತಿಯು ಸುಬ್ರಹ್ಮಣ್ಯ ಹೆಬ್ಬಾಗಿಲು ಅವರ ಅಪ್ರತಿಮ ಕೊಡುಗೆ ಹಾಗೂ ಅಚಲ ಸೇವೆಯನ್ನು ಗುರುತಿಸಿ ನೀಡಲಾಗಿದೆ. ಮುಂಬರುವ ದಿನಗಳಲ್ಲೂ ಸಮುದಾಯದ ಅಭ್ಯುದಯಕ್ಕೆ ಅವರ ಕೊಡುಗೆ ಮುಂದುವರೆಯಲಿ ಎಂದು ಹಾರೈಸೋಣ.

ಅವರು ಕತಾರಿನಲ್ಲಿ ಕಳೆದ 17 ವರ್ಷಗಳಿಗಿಂತ ಹೆಚ್ಚು ಕಾಲ ವಾಸಿಸುತ್ತಿದ್ದು ಹಲವಾರು ಸಾಮಾಜಿಕ, ಸಾಂಸ್ಕೃತಿಕ ಹಾಗೂ ಕ್ರೀಡಾ ಕಾರ್ಯಕ್ರಮಗಳಲ್ಲಿ. ತಮ್ಮನ್ನು ತಾವು ತೊಡಗಿಸಿಕೊಂಡು ಭಾರತೀಯ ಸಮುದಾಯದ ಅಭಿವೃದ್ಧಿ ಹಾಗೂ ಏಳಿಗೆಗೆ ಶ್ರಮಿಸುತ್ತಿರುವರು.

Exit mobile version