Site icon Kundapra.com ಕುಂದಾಪ್ರ ಡಾಟ್ ಕಾಂ

ಡಾ. ಅಂಪಾರು ನಿತ್ಯಾನಂದ ಶೆಟ್ಟಿ ಅವರಿಗೆ ನಮ್ಮೂರ ಕೀರ್ತಿ ಕಳಶ ಪ್ರಶಸ್ತಿ ಪ್ರದಾನ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ: 
ಸೇವಾ ಚೇತನ ಟ್ರಸ್ಟ್ ರಿ. ಮೂಡುಬಗೆ ಅಂಪಾರು ಇದರ ನಾಲ್ಕನೇ ವಾರ್ಷಿಕೋತ್ಸವದ ಪ್ರಯುಕ್ತ ಶನಿವಾರ ಅಂಪಾರು ಮೂಡುಬಗೆ ಶಾನ್ಕಟ್ಟು ಮೈದಾನದಲ್ಲಿ ನಡೆದ ನಮ್ಮೂರ ಸಂಭ್ರಮ  ಕಾರ್ಯಕ್ರಮದಲ್ಲಿ ಸಂಘಟಕ, ಪ್ರಾಧ್ಯಾಪಕ ಡಾ. ಅಂಪಾರು ನಿತ್ಯಾನಂದ ಶೆಟ್ಟಿ ಅವರಿಗೆ 2024ರ ನಮ್ಮೂರ ಕೀರ್ತಿ ಕಳಶ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಬೆಂಗಳೂರು ಗ್ರಾಮಾಂತರ ಲೋಕಸಭಾ ಸದಸ್ಯರು, ಜಯದೇವ ಹೃದ್ರೋಗ ಆಸ್ಪತ್ರೆಯ ಆಡಳಿತ ನಿರ್ದೇಶಕರು ಅದ ಡಾ. ಸಿ.ಎನ್. ಮಂಜುನಾಥ್ ಪ್ರಶಸ್ತಿ ಪ್ರದಾನ ಮಾಡಿದರು. ಸೌತ್ ಫೀಲ್ಡ್ ಪೇಂಟ್ಸ್ ನ ಆಡಳಿತ ನಿರ್ದೇಶಕ ಎಸ್. ಎಸ್. ಹೆಗ್ಡೆ ನಮ್ಮೂರ ಸಂಭ್ರಮವನ್ನು ಉದ್ಘಾಟಿಸಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಈ ಸಂದರ್ಭದಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರುರಾಜ ಶೆಟ್ಟಿ ಗಂಟಿಹೊಳೆ, ಬೆಂಗಳೂರು ಬಂಟರ ಸಂಘದ ಅಧ್ಯಕ್ಷರಾದ ಸಿ.ಎ ಅಶೋಕ ಶೆಟ್ಟಿ, ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷರಾದ  ಪ್ರವೀಣ್ ಶೆಟ್ಟಿ, ಬೆಂಗಳೂರಿನ ಹಿರಿಯ ಉದ್ಯಮಿ ಆನಗಳ್ಳಿ ಕರುಣಾಕರ ಹೆಗ್ಡೆ, ಬೆಂಗಳೂರು ಬಂಟರ ಸಂಘದ ಮಾಜಿ ಅಧ್ಯಕ್ಷರಾದ ಉಪೇಂದ್ರ ಶೆಟ್ಟಿ, ಹುಬ್ಬಳ್ಳಿ ಧಾರವಾಡ ಬಂಟರ ಸಂಘದ ಅಧ್ಯಕ್ಷರಾದ ಸುಗ್ಗಿ ಸುಧಾಕರ ಶೆಟ್ಟಿ ಆಸ್ಟ್ರೇಲಿಯಾದ ಉದ್ಯಮಿ ಅಜ್ರಿ ತಗ್ಗುಂಜೆಮನೆ ದಯಾನಂದ ಶೆಟ್ಟಿ , ಮೆರಿಟಿ ಹಾಸ್ಪಿಟಾಲಿಟಿ ಪ್ರೈವೇಟ್ ಲಿಮಿಟೆಡ್ ಮುಂಬೈನ ಆಡಳಿತ ನಿರ್ದೇಶಕ ಅಶೋಕ್ ಶೆಟ್ಟಿ ಬೆಳ್ಳಾಡಿ, ಗೋಲ್ಡನ್ ಫೋರ್ಕ್ ಹಾಸ್ಪಿಟಾಲಿಟಿ ಪ್ರೈವೇಟ್ ಲಿಮಿಟೆಡ್ ಆಡಳಿತ ನಿರ್ದೇಶಕ ಆದರ್ಶ ಶೆಟ್ಟಿ ಹಾಲಾಡಿ, ಸಾಗರ ಬಂಟರ ಸಂಘದ ಅಧ್ಯಕ್ಷರಾದ ಸುಧೀರ್ ಶೆಟ್ಟಿ, ಸೇವಾ ಚೇತನ ಟ್ರಸ್ಟ್ ನ ಸ್ಥಾಪಕ ಅಧ್ಯಕ್ಷರಾದ ಸಂತೋಷ್ ಶೆಟ್ಟಿ ಮೂಡುಬಗೆ, ಅಧ್ಯಕ್ಷರಾದ ಅರುಣ್ ಶೆಟ್ಟಿ ಕಂಚಾರು, ಅಶೋಕ್ ನಾಯ್ಕ, ಪ್ರಧಾನ ಕಾರ್ಯದರ್ಶಿ ನವೀನ್ ಶೆಟ್ಟಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

Exit mobile version