ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ಐಡಿಯಲ್ ಪ್ಲೇ ಅಬಾಕಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ವತಿಯಿಂದ ಬೆಂಗಳೂರಿನಲ್ಲಿ ನಡೆದ 20ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ ಕಾಂಪಿಟೇಶನ್ ಸ್ಪರ್ಧೆಯಲ್ಲಿ ವೃಷಭ್ ಶೆಣೈ ಪ್ರಥಮ ಸ್ಥಾನ ಪಡೆದುಕೊಂಡಿದ್ದಾನೆ.
ಗಂಗೊಳ್ಳಿಯ ಎಸ್.ವಿ. ಆಂಗ್ಲ ಮಾಧ್ಯಮ ಶಾಲೆಯ 6ನೇ ತರಗತಿಯ ವಿದ್ಯಾರ್ಥಿಯಾಗಿರುವ ವೃಷಭ್ ಶೆಣೈ, ಉದ್ಯಮಿ ಜಿ. ವಿಠಲ ಭಾಸ್ಕರ ಶೆಣೈ ಮತ್ತು ವೈಷ್ಣವಿ ಶೆಣೈ ದಂಪತಿ ಪುತ್ರ.