Kundapra.com ಕುಂದಾಪ್ರ ಡಾಟ್ ಕಾಂ

ರಾಷ್ಟ್ರ ಮಟ್ಟದ ಅಬಾಕಸ್‌ ಮತ್ತು ಮೆಂಟಲ್‌ ಅರಿಥಮೆಟಿಕ್ ಸ್ಪರ್ಧೆಯಲ್ಲಿ ಆರಾಧ್ಯಗೆ ಪ್ರಥಮ ಸ್ಥಾನ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ಐಡಿಯಲ್ ಪ್ಲೇ ಅಬಾಕಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ವತಿಯಿಂದ ಬೆಂಗಳೂರಿನಲ್ಲಿ ನಡೆದ 20ನೇ ರಾಷ್ಟ್ರ ಮಟ್ಟದ ಅಬಾಕಸ್ ಸ್ಪರ್ದೆಯಲ್ಲಿ ಆರಾಧ್ಯ ಆರ್. ಪ್ರಥಮ ಸ್ಥಾನ ಪಡೆದುಕೊಂಡಿದ್ದಾಳೆ.

ಗಂಗೊಳ್ಳಿಯ ಕೊಂಚಾಡಿ ರಾಧಾ ಶೆಣೈ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ 5ನೇ ತರಗತಿಯ ವಿದ್ಯಾರ್ಥಿನಿಯಾಗಿರುವ ಅರಾಟೆ ರಾಘವೇಂದ್ರ ಪೂಜಾರಿ ಮತ್ತು ಶಿಕ್ಷಕಿ ಯಶೋದ ದಂಪತಿ ಪುತ್ರಿ.

ಈಕೆ ಪ್ರಸನ್ನ ಕೆ., ಮಹಾಲಕ್ಷ್ಮೀ ಮತ್ತು ಸುನೀತ ಅವರಿಂದ ತರಬೇತಿ ಪಡೆದಿರುತ್ತಾಳೆ.

Exit mobile version