Kundapra.com ಕುಂದಾಪ್ರ ಡಾಟ್ ಕಾಂ

ಕುಂದಾಪುರ: ತಲ್ಲೂರು ಸೇತುವೆ ಬಳಿ ಅಪರಿಚಿತ ವಾಹನ ಡಿಕ್ಕಿಯಾಗಿ ಪಾದಚಾರಿ ಸಾವು

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ತಾಲೂಕಿನ ತಲ್ಲೂರು ಸೇತುವೆ ಬಳಿ ಅಪರಿಚಿತ ವಾಹನ ಡಿಕ್ಕಿಯಾಗಿ ಪಾದಚಾರಿಯೊಬ್ಬರು ಸಾವನ್ನಪ್ಪಿದ ಘಟನೆ ಬುಧವಾರ ಬೆಳಗಿನ ಜಾವ ಸಂಭವಿಸಿದೆ. ಹೊನ್ನಾವರ ತಾಲೂಕಿನ ಗೇರುಸೊಪ್ಪದ ಮೇಘನಾಥ (39) ಮೃತಪಟ್ಟ ದುರ್ದೈವಿ.

ಅವರು ಕೆಲಸ ಮುಗಿಸಿ, ತ್ರಾಸಿಯಲ್ಲಿನ ತನ್ನ ಅಕ್ಕನ ಮನೆಗೆ ತೆರಳಲು ಬಸ್‌ ಸಿಗದೇ ಹೆದ್ದಾರಿಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಡಿಕ್ಕಿ ಹೊಡೆದ ಅಪರಿಚಿತ ವಾಹನ ಪರಾರಿಯಾಗಿದೆ.

ವ್ಯಕ್ತಿಯ ಮೈ ಕೈಗೆ, ತಲೆಗೆ ಗಂಭೀರ ಗಾಯವಾಗಿದ್ದು, ಸ್ಥಳೀಯರು ಸೇರಿ ಕುಂದಾಪುರದ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ವೈದ್ಯರು ಆಸ್ಪತ್ರೆಗೆ ಬರುವಾಗಲೇ ಮೇಘನಾಥ ಸಾವನ್ನಪ್ಪಿರುವುದಾಗಿ ತಿಳಿಸಿದ್ದಾರೆ.

ಈ ಬಗ್ಗೆ ಕುಂದಾಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Exit mobile version