ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ರೋಟರಿ ಕ್ಲಬ್ ಗಂಗೊಳ್ಳಿ ಇದರ ವತಿಯಿಂದ ಕೆಎಂಸಿ ಮಣಿಪಾಲ ಇದರ ಸಹಯೋಗದೊಂದಿಗೆ ಉಚಿತ ನೇತ್ರ ತಪಾಸಣಾ ಮತ್ತು ಚಿಕಿತ್ಸೆ ಶಿಬಿರ ಗಂಗೊಳ್ಳಿ ಎಸ್.ವಿ. ಪದವಿ ಪೂರ್ವ ಕಾಲೇಜಿನ ಗುಜ್ಜಾಡಿ ಗೋಪಾಲ ನಾಯಕ್ ಒಳಾಂಗಣ ಸಭಾಂಗಣದಲ್ಲಿ ಭಾನುವಾರ ನಡೆಯಿತು.
ಗಂಗೊಳ್ಳಿ ರೋಟರಿ ಕ್ಲಬ್‌ನ ಹಿರಿಯ ಸದಸ್ಯ ಉದಯಶಂಕರ ರಾವ್ ಶಿಬಿರವನ್ನು ಉದ್ಘಾಟಿಸಿದರು. ಗಂಗೊಳ್ಳಿ ರೋಟರಿ ಕ್ಲಬ್ ಅಧ್ಯಕ್ಷೆ ಚಂದ್ರಕಲಾ ಎಸ್. ತಾಂಡೇಲ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಮಣಿಪಾಲದ ತಜ್ಞ ವೈದ್ಯ ಡಾ.ಯಥಾರ್ಥ್ ಕಣ್ಣಿನ ಆರೋಗ್ಯ ಹಾಗೂ ಸಮಸ್ಯೆಗಳ ಬಗ್ಗೆ ಮಾತನಾಡಿದರು.
ಚಂದ್ರಕಲಾ ಎಸ್. ತಾಂಡೇಲ ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಕಾರ್ಯದರ್ಶಿ ಮಾಲಾಶ್ರೀ ಖಾರ್ವಿ ವಂದಿಸಿದರು. ಮಾಜಿ ಅಧ್ಯಕ್ಷ ಕೆ. ರಾಮನಾಥ ನಾಯಕ್ ಕಾರ್ಯಕ್ರಮ ನಿರ್ವಹಿಸಿದರು. ಸುಮಾರು 158 ಶಿಬಿರಾರ್ಥಿ ಶಿಬಿರದ ಪ್ರಯೋಜನವನ್ನು ಪಡೆದುಕೊಂಡರು.