Site icon Kundapra.com ಕುಂದಾಪ್ರ ಡಾಟ್ ಕಾಂ

ತ್ರಾಸಿ: ರಸ್ತೆ ದಾಟುತ್ತಿದ್ದ ಮಹಿಳೆಗೆ ಕಾರು ಢಿಕ್ಕಿಯಾಗಿ ಗಂಭೀರ ಗಾಯ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ತಾಲೂಕಿನ ತ್ರಾಸಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ದಾಟುತ್ತಿದ್ದ ಸ್ಥಳೀಯ ನಿವಾಸಿ ಗೌರಿ ಶೆಟ್ಟಿಗಾರ್‌ (60) ಅವರಿಗೆ ಕಾರು ಢಿಕ್ಕಿಯಾಗಿ ಗುರುವಾರದಂದು ಗಂಭೀರ ಗಾಯಗೊಂಡಿದ್ದಾರೆ.

ಕಾರು ಬೈಂದೂರು ಕಡೆಯಿಂದ ಕುಂದಾಪುರದ ಕಡೆಯಿಂದ ವೇಗವಾಗಿ ಸಂಚರಿಸುತ್ತಿದ್ದು, ಢಿಕ್ಕಿ ಹೊಡೆದ ರಭಸಕ್ಕೆ ಮಹಿಳೆ ಸ್ವಲ್ಪ ದೂರಕ್ಕೆ ಎಸೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದಾರೆ.

ತಕ್ಷಣ ಗಂಗೊಳ್ಳಿಯ 24×7 ಆ್ಯಂಬುಲೆನ್ಸ್‌ನ ಇಬ್ರಾಹಿಂ ಗಂಗೊಳ್ಳಿ ಅವರು ಧಾವಿಸಿ ಗಾಯಾಳುವನ್ನು ಕುಂದಾಪುರದ ಖಾಸಗಿ ಆಸ್ಪತ್ರೆಗೆ ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಅಪಘಾತದ ದೃಶ್ಯಾವಳಿ ಮಳಿಗೆಯೊಂದರ ಸಿಸಿ ಕೆಮರಾದಲ್ಲಿ ದಾಖಲಾಗಿದೆ. ಗಂಗೊಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Exit mobile version