ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕರ್ನಾಟಕ ಒಲಿಂಪಿಕ್ ಸಂಸ್ಥೆ ಜಿಲ್ಲಾಡಳಿತ, ದಕ್ಷಿಣ ಕನ್ನಡ ಮತ್ತು ಉಡುಪಿ ಇವರ ಸಹಯೋಗದಲ್ಲಿ ಉಡುಪಿಯ ಅಜ್ಜರಕಾಡು ಮೈದಾನದಲ್ಲಿ ನಡೆದ ರಾಜ್ಯ ಮಟ್ಟದ ಕರ್ನಾಟಕ ಕ್ರೀಡಾಕೂಟ 2025ರ ಎತ್ತರ ಜಿಗಿತದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸಿನಾನ್ ಚಿನ್ನದ ಪದಕ ಪಡೆಯುವುದರ ಮೂಲಕ ಅತ್ಯುತ್ತಮ ಸಾಧನೆಗೆ ಸಾಕ್ಷಿಯಾಗಿದ್ದಾನೆ.
ವಿದ್ಯಾರ್ಥಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ – ಬೋಧಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.

