ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ತೆಕ್ಕಟ್ಟೆಯ ವಿಶ್ವ ವಿನಾಯಕ ಸಿ. ಬಿ. ಎಸ್. ಸಿ. ಸ್ಕೂಲ್, ಪ್ಲೇ ಸ್ಕೂಲ್, ಎಲ್. ಕೆ. ಜಿ. ಹಾಗೂ ಯು. ಕೆ. ಜಿ. ಮಕ್ಕಳು ಪಿಂಕ್ ಕಲರ್ ಡೇ ಯನ್ನು ಆಚರಿಸಿದರು.
ಮಕ್ಕಳಲ್ಲಿ ಬಣ್ಣಗಳನ್ನು ಗುರುತಿಸಿ ನೆನಪಿನಲ್ಲಿಟ್ಟುಕೊಳ್ಳುವ ಕೌಶಲವನ್ನು ವೃದ್ಧಿಸುವ ಸಲುವಾಗಿ ಪ್ರತಿ ತಿಂಗಳು ವಿವಿಧ ಬಣ್ಣಗಳ ದಿನಾಚರಣೆಯನ್ನು ಮಾಡಿ ಮಕ್ಕಳಿಗೆ ಬಣ್ಣಗಳ ಅರಿವನ್ನು ಮೂಡಿಸುವ ಕಾರ್ಯಕ್ರಮವನ್ನು ನಡೆಸಲಾಗುತ್ತದೆ. ಆ ಪ್ರಯುಕ್ತ ವಿದ್ಯಾರ್ಥಿಗಳು ಪಿಂಕ್ ಬಣ್ಣದ ವಿವಿಧ ತಿನಿಸುಗಳು ಹಾಗೂ ವಸ್ತುಗಳನ್ನು ಪ್ರದರ್ಶಿಸಿದರು. ತರಗತಿ ಕೋಣೆಗಳಲ್ಲಿ ಪಿಂಕ್ ಬಣ್ಣದ ವಸ್ತುಗಳ ಅಲಂಕಾರವನ್ನು ಮಾಡಿ ವಿದ್ಯಾರ್ಥಿಗಳು ನಲಿದಾಡಿದರು. ವಿದ್ಯಾರ್ಥಿಗಳು ನೃತ್ಯ ಹಾಗೂ ವಿವಿಧ ಕಾರ್ಯಕ್ರಮಗಳನ್ನು ನಡೆಸಿದರು. ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಪಿಂಕ್ ಬಣ್ಣದ ಉಡುಗೆಗಳನ್ನು ತೊಟ್ಟು ಸಂಭ್ರಮಿಸಿದರು.
ಕಾರ್ಯಕ್ರಮದಲ್ಲಿ ಶಾಲಾ ಮ್ಯಾನೇಜಿಂಗ್ ಡೈರೆಕ್ಟರ್ ಎಂ. ಪ್ರಭಾಕರ ಶೆಟ್ಟಿ, ಶಾಲಾ ಅಕಾಡೆಮಿಕ್ ಡೈರೆಕ್ಟರ್ ದಿವಾಕರ್ ಶೆಟ್ಟಿ ಹೆಚ್., ಪ್ರಾಂಶುಪಾಲ ನಿತಿನ್ ಡಿ. ಅಲ್ಮೇಡಾ, ಕಿಂಡರ್ ಗಾರ್ಟನ್ ಸಂಯೋಜಕಿ ವಿಲಾಸಿನಿ ಶೆಟ್ಟಿ, ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಶಾಲಾ ಸಿಬ್ಬಂದಿಯವರು ಉಪಸ್ಥಿತರಿದ್ದರು.

