ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮ (ಕೆ.ಎಸ್.ಡಿ.ಸಿ) ಬೆಂಗಳೂರು, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕೌಶಲ್ಯಾ ಮಿಷನ್ ಹಾಗೂ ಡಾ.ಜಿ.ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು, ಅಜ್ಜರಕಾಡು, ಉಡುಪಿ ಇವರುಗಳ ಸಹಯೋಗದೊಂದಿಗೆ ಉದ್ಯೋಗಾಕಾಂಕ್ಷಿಗಳಿಗೆ ಉದ್ಯೋಗಾವಕಾಶವನ್ನು ನೀಡುವ ಸಲುವಾಗಿ ಜಿಲ್ಲಾ ಮಟ್ಟದ ಕೌಶಲ್ಯ ರೋಜ್‌ಗಾರ್ ಮೇಳ ಕಾರ್ಯಕ್ರಮವು ಫೆಬ್ರವರಿ 19ರಂದು ನಗರದ ಅಜ್ಜರಕಾಡು ಡಾ. ಜಿ. ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆಯಲಿದೆ.
ಎಲ್ಲಾ ವಿದ್ಯಾರ್ಹತೆಯ ಉದ್ಯೋಗಾಕಾಂಕ್ಷಿಗಳು ಈ ಉದ್ಯೋಗ ಮೇಳದ ಸದುಪಯೋಗ ಪಡೆದುಕೊಳ್ಳಬಹುದು ಹಾಗೂ https://udupi.nic.in/ ಲಿಂಕ್ ಮೂಲಕ ನೋಂದಣಿ ಮಾಡಿಕೊಳ್ಳಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಹಾಗೂ ಉಚಿತವಾಗಿ ನೋಂದಣಿ ಮಾಡಿಕೊಳ್ಳಲು ಜಿಲ್ಲಾ ಕೌಶಲ್ಯಾಭಿವೃದ್ದಿ ಅಧಿಕಾರಿಗಳ ಕಛೇರಿ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ನಂ:201, ಬಿ ಬ್ಲಾಕ್, ಮೊದಲನೇ ಮಹಡಿ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ: 9449943882, 9481456741, 9964428002 ಹಾಗೂ 9481510655 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.