Kundapra.com ಕುಂದಾಪ್ರ ಡಾಟ್ ಕಾಂ

ಕುಂದಾಪುರ: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ತಾಲೂಕಿನ ಯಡಮೊಗೆ ಗ್ರಾಮದ ನಿವಾಸಿ ವೆಂಕಟರಮಣ (65) ಅವರು ಸೋಮವಾರ ರಾತ್ರಿ ಮನೆ ಸಮೀಪದ ಗೇರು ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಅವರು ಸಂಜೆ ಯಕ್ಷಗಾನ ನೋಡಲು ಹೋಗುವುದಾಗಿ ಮನೆಯಿಂದ ಹೊರಹೋದವರು ವಾಪಸ್ ಬಾರದಿರುವುದನ್ನು ನೋಡಿ ಹುಡುಕಾಡಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.

ಈ ಬಗ್ಗೆ ಶಂಕರನಾರಾಯಣ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.

Exit mobile version