Kundapra.com ಕುಂದಾಪ್ರ ಡಾಟ್ ಕಾಂ

ಕುಂದಾಪುರ: ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹದ ಅಂಗವಾಗಿ ವಿದ್ಯಾರ್ಥಿಗಳಿಂದ ಜಾಥಾ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ 2025ರ ಅಂಗವಾಗಿ ಇಲ್ಲಿನ ವೆಂಕಟರಮಣ, ಒಕ್ ವುಡ, ಸೈಂಟ್ ಪಿಯೂಷ್ ಶಾಲೆಗಳ ವಿದ್ಯಾರ್ಥಿಗಳಿಂದ ರಸ್ತೆ ಸುರಕ್ಷತಾ ನಿಯಮ ಪಾಲಿಸುವ ಬಗ್ಗೆ ನಿಯಮಗಳ ಘೋಷಣೆಯೊಂದಿಗೆ ಕುಂದಾಪುರ ಶಾಸ್ತ್ರೀ ಪಾರ್ಕ್‌ನಿಂದ ಕುಂದಾಪುರ ಸಂಚಾರ ಠಾಣೆಯವರೆಗೆ ಜಾಥಾ ನಡೆಯಿತು.

ಕುಂದಾಪುರ ಸಂಚಾರ ಪೊಲೀಸ್‌ ಠಾಣೆಯ ನೇತೃತ್ವದಲ್ಲಿ ನಡೆದ ಜಾಥಾದಲ್ಲಿ ಪಿ.ಐ ನಂಜಪ್ಪ, ಕುಂದಾಪುರ ಸಂಚಾರ ಠಾಣೆ ಪಿಎಸ್ಐ ಪ್ರಸಾದ್ ಕುಮಾರ, ಕುಂದಾಪುರ ಪುರಸಭೆ ಮುಖ್ಯಾಧಿಕಾರಿ ಆನಂದ ಭಾಗವಹಿಸಿದ್ದರು.

Exit mobile version