ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಶ್ರೀ ವೆಂಕಟರಮಣ ದೇವ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಟ್ರಸ್ಟ್ ಕುಂದಾಪುರ ವತಿಯಿಂದ ನಡೆಸಲ್ಪಡುವ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರಾಥಮಿಕ ವಿಭಾಗದ 2024-2025ರ ರಕ್ಷಕ – ಶಿಕ್ಷಕ ಸಭೆಯು ಸಂಸ್ಥೆಯ ಕಾರ್ಯದರ್ಶಿಗಳಾದ ಕೆ. ರಾಧಾಕೃಷ್ಣ ಶೈಣೆ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಮುಖ್ಯ ಅತಿಥಿಯಾಗಿ ಆಗಮಿಸಿದ ಉಡುಪಿ ಡಾ. ಎ.ವಿ.ಬಾಳಿಗಾ ಮೆಮೋರಿಯಲ್ ಆಸ್ಪತ್ರೆಯ ಆಪ್ತ ಸಮಾಲೋಚಕಿ ಸೌಜನ್ಯ ಶೆಟ್ಟಿ ಅವರು” ಪ್ರಭಾವಿ ಪೋಷಕತ್ವ” ದ ಕುರಿತು ತಿಳಿಸಿದರು.
ಸಭೆಯಲ್ಲಿ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ ಪ್ರೌಢ ವಿಭಾಗದ ಮುಖ್ಯೋಪಾಧ್ಯಾಯರಾದ ಕೃಷ್ಣ ಅಡಿಗ, ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯಿನಿಯಾದ ಪ್ರಮೀಳಾ ಡಿಸೋಜ ಅವರು ಉಪಸ್ಥಿತರಿದ್ದರು.
ಪ್ರಾಥಮಿಕ ವಿಭಾಗದ ಮುಖ್ಯಸ್ಥೆ ರೇಷ್ಮಾ ಡಿಸೋಜ ಅವರು ಪ್ರಾಸ್ತಾವಿಕ ಮಾತುಗಳನ್ನಾಡಿದರು. ಶೈಲಾ ಅವರು ಕಾರ್ಯಕ್ರಮವನ್ನು ನಿರೂಪಿಸಿ, ಶಿಕ್ಷಕಿಯರಾದ ಪುಷ್ಪಾ ಸರ್ವರನ್ನು ಸ್ವಾಗತಿಸಿ, ವಂದನಾ ಅವರು ವಂದನಾರ್ಪಣೆ ಗೈದರು.

