Site icon Kundapra.com ಕುಂದಾಪ್ರ ಡಾಟ್ ಕಾಂ

ಮೂಡ್ಲಕಟ್ಟೆ ತಾಂತ್ರಿಕ ವಿದ್ಯಾಲಯ: ಎಂ.ಬಿ.ಎ. ಪದವಿ ವಿದ್ಯಾರ್ಥಿಗಳ ಕೌಶಲ್ಯ ಅಭಿವೃದ್ಧಿ ತರಬೇತಿ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ಇಲ್ಲಿನ ಮೂಡ್ಲಕಟ್ಟೆ ತಾಂತ್ರಿಕ ವಿದ್ಯಾಲಯದಲ್ಲಿ ಎಂ.ಬಿ.ಎ. ಪದವಿ ವಿದ್ಯಾರ್ಥಿಗಳ ಕೌಶಲ್ಯ ಅಭಿವೃದ್ಧಿಯು ಸಲುವಾಗಿ ಡಿಜಿಟಲ್  ಮಾರ್ಕೆಟಿಂಗ್ ವಿಷಯದ ಕುರಿತಾಗಿ ವಿಶೇಷ ತರಬೇತಿಯನ್ನು ಆಯೋಜಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾದ  ಡಾ. ನಿಧೀಶ್ ರಾವ್  ಪ್ರೊಫೆಸರ್ ನಿಟ್ಟೆ  ಅವರು  ಡಿಜಿಟಲ್ ಮಾರ್ಕೆಟಿಂಗ್  ಕುರಿತಾಗಿ ಮಾರ್ಗದರ್ಶನ ನೀಡಿದರು.

ಡಿಜಿಟಲ್ ಮಾರ್ಕೆಟಿಂಗ್ ಮಹತ್ವ, ಎಸ್ಇಒ ತಂತ್ರಗಳು, ಸೋಶಿಯಲ್ ಮೀಡಿಯಾ ಮಾರ್ಕೆಟಿಂಗ್, ಪೇ ಪರ್ ಕ್ಲಿಕ್ ಜಾಹೀರಾತುಗಳು ಕಂಟೆಂಟ್ ಮಾರ್ಕೆಟಿಂಗ್ ಮತ್ತು ಬ್ರಾಂಡ್ ಬಿಲ್ಡಿಂಗ್, ಪ್ರಾಯೋಗಿಕ ಉದಾಹರಣೆಗಳೂಂದಿಗೆ‌ ವಿದ್ಯಾರ್ಥಿಗಳೂಂದಿಗೆ ಚರ್ಚಿಸಿದರು .

ಕಾರ್ಯಕ್ರಮದಲ್ಲಿ ಎಂ.ಬಿ.ಎ. ವಿಭಾಗದ ಮುಖ್ಯಸ್ತೆ ಡಾ. ಸುಚಿತ್ರಾ ಪೂಜಾರಿ ಮತ್ತು ಉಪನ್ಯಾಸಕರು ಉಪಸ್ಥಿತಿಯಲ್ಲಿದ್ದರು.  ಕಾರ್ಯಕ್ರಮದಲ್ಲಿ ದ್ವಿತೀಯ ವಿಭಾಗದ ವಿದ್ಯಾರ್ಥಿನಿಯಾದ ರಶ್ಮಿತಾ ನಿರೂಪಿಸಿ, ಸ್ವಾಗತಿಸಿದರು.

Exit mobile version