Kundapra.com ಕುಂದಾಪ್ರ ಡಾಟ್ ಕಾಂ

ಕೋಡಿ ಬ್ಯಾರೀಸ್‌ನಲ್ಲಿ 38ನೇ ‘ಸ್ವಚ್ಛ ಕಡಲತೀರ – ಹಸಿರು ಕೋಡಿ’ ಅಭಿಯಾನ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳು ಕೋಡಿ ಇದರ 38ನೇ ‘ಸ್ವಚ್ಛ ಕಡಲತೀರ – ಹಸಿರು ಕೋಡಿ’ ಅಭಿಯಾನವು ಭಾನುವಾರದಂದು ನಡೆಯಿತು.

ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ವಿಶ್ವಸ್ಥ ಮಂಡಳಿ ಸದಸ್ಯರಾದ ಡಾ. ಆಸೀಫ್ ಬ್ಯಾರಿ ಅವರು, ಸ್ವಚ್ಛತಾ ಕಾರ್ಯಕ್ಕೆ  ಪಣತೊಟ್ಟು ಆಗಮಿಸಿದ ಎಲ್ಲರನ್ನೂ ಉದ್ದೇಶಿಸಿ ಮಾತನಾಡಿ “ನೀವೆಲ್ಲರೂ ನಿಜವಾದ ನಾಯಕರು ಎಂದು ತಿಳಿಸಿ, ಅವರಿಗೆ ಶುಭ ಹಾರೈಸಿದರು”

ಈ ಸ್ವಚ್ಛತಾ ಕಾರ್ಯಕ್ಕೆ ನಿರಂತರ ಸಹಕಾರ ನೀಡುತ್ತಿರುವ ಕುಂದಾಪುರ ಪುರಸಭೆ ಮುಖ್ಯಾಧಿಕಾರಿಗಳು ಹಾಗೂ ಸಿಬ್ಬಂದಿಗಳು, ಕೋಟೇಶ್ವರ ಪಂಚಾಯತಿ ಅಧ್ಯಕ್ಷರು ಹಾಗೂ ಸಿಬ್ಬಂದಿಗಳಿಗೆ ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಹಾಜಿ. ಕೆ.ಎಂ ಅಬ್ದುಲ್ ರೆಹಮಾನ್ ಅವರು ಧನ್ಯವಾದ ಸಲ್ಲಿಸಿದರು. ಈ ಸ್ವಚ್ಛತಾ ಕಾಯಕದಲ್ಲಿ ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ವಿವಿಧ ವಿಭಾಗಗಳ ಮುಖ್ಯಸ್ಥರು, ಶಾಲಾಭಿವೃದ್ಧಿ ಮತ್ತು ಸಲಹಾ ಮಂಡಳಿ ಸದಸ್ಯರು, ಹಿತೈಷಿಗಳ ಬಳಗ, ಪೋಷಕರು, ಬೋಧಕ-ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಉತ್ಸಾಹದಿಂದ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

ಬ್ಯಾರೀಸ್ ಪದವಿ ಕಾಲೇಜಿನ ಕನ್ನಡ ಉಪನ್ಯಾಸಕಿ ಸುಮನಾ ಕಾರ್ಯಕ್ರಮ ನಿರೂಪಿಸಿ, ಗಣ್ಯರನ್ನು ವಂದಿಸಿದರು.

Exit mobile version