Site icon Kundapra.com ಕುಂದಾಪ್ರ ಡಾಟ್ ಕಾಂ

ಗಂಗೊಳ್ಳಿ: ಮಕ್ಕಳ ಹಕ್ಕುಗಳ ರಕ್ಷಣೆ ಬಗ್ಗೆ ಕಾರ್ಯಾಗಾರ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಗಂಗೊಳ್ಳಿ:
ಇಲ್ಲಿನ ಕೊಂಚಾಡಿ ರಾಧಾ ಶೆಣೈ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಖಾರ್ವಿಕೇರಿ ಗಂಗೊಳ್ಳಿ ಮತ್ತು ಶಾಲೆಯ ಅಮೃತ ಮಹೋತ್ಸವ ಸಮಿತಿ ವತಿಯಿಂದ ಮಕ್ಕಳ ಹಕ್ಕುಗಳ ರಕ್ಷಣೆ ಬಗ್ಗೆ ಕಾರ್ಯಾಗಾರ ಇತ್ತೀಚಿಗೆ ನಡೆಯಿತು.

ಸಂಪನ್ಮೂಲ ವ್ಯಕ್ತಿಯಾಗಿದ್ದ ಗಂಗೊಳ್ಳಿ ಕರಾವಳಿ ಕಾವಲು ಪೊಲೀಸ್ ಠಾಣೆಯ ಪಿಎಸ್‌ಐ ಮುಕ್ತ ಅವರು ಮಕ್ಕಳ ಹಕ್ಕುಗಳು ಹಾಗೂ ಅದರ ರಕ್ಷಣೆ ಬಗ್ಗೆ ಪೋಷಕರಿಗೆ ಮಾಹಿತಿ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ರವಿಶಂಕರ್ ಖಾರ್ವಿ ವಹಿಸಿದ್ದರು. ಅಮೃತ ಮಹೋತ್ಸವ ಸಮಿತಿಯ ಅಧ್ಯಕ್ಷ ದಿವಾಕರ ಖಾರ್ವಿ, ಸ್ಥಳ ದಾನಿ ಅಶೋಕ್ ಕಾನೋಜಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಲಕ್ಷ್ಮಣ್ ಖಾರ್ವಿ, ಪ್ರಭಾರ ಮುಖ್ಯ ಶಿಕ್ಷಕಿ ಯಶೋಧ ಉಪಸ್ಥಿತರಿದ್ದರು. 

ಸಹಶಿಕ್ಷಕಿಯರಾದ ಉಷಾ ಸ್ವಾಗತಿಸಿದರು. ಅನುಷಾ ಸಿ. ಬಂಗೇರಾ ಕಾರ್ಯಕ್ರಮ ನಿರ್ವಹಿಸಿದರು. ಆಶಾಲತಾ ವಂದಿಸಿದರು.

Exit mobile version