ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ರೋಟರಿ ಕ್ಲಬ್ ಗಂಗೊಳ್ಳಿ ಇದರ ವತಿಯಿಂದ ಗುಜ್ಜಾಡಿಯ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಗೆ ಅಕ್ಷರ ದಾಸೋಹ ಯೋಜನೆಗೆ ಅನುಕೂಲ ಆಗುವಂತೆ ಮಕ್ಕಳಿಗೆ ಊಟ ಬಡಿಸಲು ಸ್ಟೀಲಿನ ಟ್ರಾಲಿ ಮತ್ತು ಪಾತ್ರೆಯನ್ನು ಕೊಡುಗೆಯಾಗಿ ಮಂಗಳವಾರ ನೀಡಲಾಯಿತು.
ಗಂಗೊಳ್ಳಿ ರೋಟರಿ ಕ್ಲಬ್‌ನ ಅಧ್ಯಕ್ಷೆ ಚಂದ್ರಕಲಾ ಎಸ್. ತಾಂಡೇಲ ಅವರು ಸ್ಟೀಲಿನ ಟ್ರಾಲಿ ಮತ್ತು ಪಾತ್ರೆಯನ್ನು ಶಾಲೆಯ ಮುಖ್ಯ ಶಿಕ್ಷಕ ಗಂಗಾಧರ ಬಂಟ ಮತ್ತು ಎಸ್‌ಡಿಎಂಸಿ ಅಧ್ಯಕ್ಷ ನಾರಾಯಣ ಕೆ. ಅವರಿಗೆ ಹಸ್ತಾಂತರಿಸಿದರು.
ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಾಮನಾಥ್ ಚಿತ್ತಾಲ್, ಶಾಲೆಯ ಶತಮಾನೋತ್ಸವ ಸಮಿತಿ ಅಧ್ಯಕ್ಷ ಉಮೇಶ ಎಲ್. ಮೇಸ್ತ, ಗಂಗೊಳ್ಳಿ ರೋಟರಿ ಕ್ಲಬ್ ಸದಸ್ಯರು ಹಾಗೂ ಶಾಲಾ ಶಿಕ್ಷಕರು ಉಪಸ್ಥಿತರಿದ್ದರು.

