Site icon Kundapra.com ಕುಂದಾಪ್ರ ಡಾಟ್ ಕಾಂ

ವಿಶ್ವ ವಿನಾಯಕ ಸಿ.ಬಿ.ಎಸ್.ಇ ಶಾಲೆ: 10ನೇ ತರಗತಿಯ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ಇಲ್ಲಿನ ತೆಕ್ಕಟ್ಟೆಯ ವಿಶ್ವ ವಿನಾಯಕ ಸಿ.ಬಿ.ಎಸ್.ಇ ಶಾಲೆಯಲ್ಲಿ 10ನೇ ತರಗತಿಯ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆಯನ್ನು ಕೊಡಲಾಯಿತು.

ಶಾಲಾ ಮ್ಯಾನೇಜಿಂಗ್ ಡೈರೆಕ್ಟರ್ ಎಮ್. ಪ್ರಭಾಕರ ಶೆಟ್ಟಿ ಅವರು ಮಾತನಾಡಿ, ವಿದ್ಯಾರ್ಥಿಗಳು ಜೀವನದಲ್ಲಿ ಯಶಸ್ಸು ಗಳಿಸಿ ಪೋಷಕರು ಹಾಗೂ ಶಾಲೆಗೆ ಕೀರ್ತಿ ತರುವಂತವರಾಗಲಿ ಎಂದು ಶುಭ ಹಾರೈಸಿದರು.

ಶಾಲಾ ಅಕಾಡೆಮಿಕ್ ಡೈರೆಕ್ಟರ್ ದಿವಾಕರ ಶೆಟ್ಟಿ. ಹೆಚ್‌.  ಅವರು ಮುಂದಿನ ಉನ್ನತ ವಿದ್ಯಾಭ್ಯಾಸದ ಮಾರ್ಗದರ್ಶನ ನೀಡಿದರು.

ಒಂಭತ್ತನೇ ತರಗತಿಯ ವಿದ್ಯಾರ್ಥಿಗಳು ಸಾಂಸ್ಕ್ರತಿಕ ಕಾರ್ಯಕ್ರಮವನ್ನು ಆಯೋಜಿಸಿ ವಿವಿಧ ಸ್ಪರ್ಧೆಗಳನ್ನು ನಡೆಸಿದರು. ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು. ನಿರಂತರ 10 ವರ್ಷಗಳನ್ನು ಕಳೆದು ಹಲವು ಸವಿನೆನಪುಗಳನ್ನು ತಮ್ಮ ನೆನಪಿನ ಬುತ್ತಿಯಲ್ಲಿಟ್ಟುಕೊಂಡು ಮುಂದೆ ಸಾಗುವ ಅನಿವಾರ್ಯತೆಯಿಂದ ವಿದ್ಯಾರ್ಥಿಗಳು ಭಾವುಕರಾದರು.

ಕಾರ್ಯಕ್ರಮದಲ್ಲಿ ಪ್ರಾಂಶುಪಾಲ ನಿತಿನ್ ಡಿ. ಆಲ್ಮೇಡಾ, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಶಿಕ್ಷಕಿ ರೋಹಿಣಿ ಕಾರ್ಯಕ್ರಮ ಸಂಘಟಿಸಿದರು.

Exit mobile version