Site icon Kundapra.com ಕುಂದಾಪ್ರ ಡಾಟ್ ಕಾಂ

ಗಂಗೊಳ್ಳಿ: ಅಂತರ್ ಶಾಲಾ ಮಕ್ಕಳ ರಸಪ್ರಶ್ನೆ ಸ್ಪರ್ಧೆ ಮತ್ತು ಭಕ್ತಿಗೀತೆ ಸ್ಪರ್ಧೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಗಂಗೊಳ್ಳಿ:
ಶ್ರೀ ಗ್ರಾಮ ಜಟ್ಟಿಗೇಶ್ವರ ಸೇವಾ ಸಮಿತಿ ಮಲ್ಯರಬೆಟ್ಟು ಗಂಗೊಳ್ಳಿ ಹಾಗೂ ಶ್ರೀ ಜಟ್ಟಿಗೇಶ್ವರ ಭಜನಾ ಮಂಡಳಿ ಮಲ್ಯರಬೆಟ್ಟು ಗಂಗೊಳ್ಳಿ ಇದರ ಸುವರ್ಣ ಸಂಭ್ರಮ ಕಾರ್ಯಕ್ರಮದ ಪ್ರಯುಕ್ತ ಆಹ್ವಾನಿತ ಅಂತರ್ ಶಾಲಾ ಮಕ್ಕಳ ರಸಪ್ರಶ್ನೆ ಸ್ಪರ್ಧೆ ಮತ್ತು ಭಕ್ತಿಗೀತೆ ಸ್ಪರ್ಧೆ ಗಂಗೊಳ್ಳಿ ಮಲ್ಯರಬೆಟ್ಟು ಶ್ರೀ ಜಟ್ಟಿಗೇಶ್ವರ ಸಮುದಾಯ ಭವನದಲ್ಲಿ ಭಾನುವಾರ ನಡೆಯಿತು.

ಸೇವಾ ಸಮಿತಿ ಅಧ್ಯಕ್ಷ ರಾಮಪ್ಪ ಖಾರ್ವಿ, ಭಜನಾ ಮಂಡಳಿ ಅಧ್ಯಕ್ಷ ಜನಾರ್ದನ ಖಾರ್ವಿ, ಸೇವಾ ಸಮಿತಿ, ಭಜನಾ ಮಂಡಳಿ ಹಾಗೂ ಸುವರ್ಣ ಮಹೋತ್ಸವ ಸಮಿತಿ ಸದಸ್ಯರು ಮೊದಲಾದವರು ಉಪಸ್ಥಿತರಿದ್ದರು.

ರಸಪ್ರಶ್ನೆ ಸ್ಪರ್ಧೆಯಲ್ಲಿ ಕೊಂಚಾಡಿ ರಾಧಾ ಶೆಣೈ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಗಂಗೊಳ್ಳಿ (ಪ್ರಥಮ), ಸ್ಟೆಲ್ಲಾ ಮಾರೀಸ್ ಪ್ರೌಢಶಾಲೆ ಗಂಗೊಳ್ಳಿ (ದ್ವಿತೀಯ) ಮತ್ತು ಎಸ್.ವಿ. ಹಿರಿಯ ಪ್ರಾಥಮಿಕ ಶಾಲೆ ಗಂಗೊಳ್ಳಿ (ತೃತೀಯ) ಬಹುಮಾನ ಪಡೆದುಕೊಂಡಿತು.

Exit mobile version