Site icon Kundapra.com ಕುಂದಾಪ್ರ ಡಾಟ್ ಕಾಂ

ಜೆ.ಇ.ಇ (ಮೈನ್) ಫಲಿತಾಂಶ: ಕ್ರಿಯೇಟಿವ್ ವಿದ್ಯಾರ್ಥಿಗಳ ಉತ್ತಮ ಸಾಧನೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ದೇಶದ ಪ್ರತಿಷ್ಠಿತ ತಾಂತ್ರಿಕ ವಿಶ್ವವಿದ್ಯಾನಿಲಯಗಳಿಗೆ ಸೇರಬಯಸುವ ವಿದ್ಯಾರ್ಥಿಗಳಿಗೆ ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ನಡೆಸುವ ಜೆ.ಇ.ಇ (ಮೈನ್) 2025 ಅರ್ಹತಾ ಪರೀಕ್ಷೆಯ ಪ್ರಥಮ ಹಂತದ ಫಲಿತಾಂಶ ಪ್ರಕಟಗೊಂಡಿದ್ದು ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು ಉತ್ತಮ ಸಾಧನೆಗೈದಿದ್ದಾರೆ.

ವಿದ್ಯಾರ್ಥಿಗಳಾದ ಚೇತನ್ ಗೌಡ ಎನ್. ಎಸ್. 99.46, ಸಾನಿಕಾ ಕೆ. ಎನ್ 99. 20, ಎಂ. ಮಂಜುನಾಥ್ 99.01, ಮೋಹಿತ್ ಎಂ. 99.16, ಎಚ್. ಎ. ರಾಜೇಶ್ 99.10, ಪರ್ಸಂಟೈಲ್ ಗಳಿಸಿರುತ್ತಾರೆ.

ಸಂಸ್ಥೆಯು ಆರಂಭದ ವರ್ಷದಿಂದಲೇ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲೂ ಉನ್ನತ ಫಲಿತಾಂಶ ಗಳಿಸುವ ಮೂಲಕ ಗುಣಾತ್ಮಕ ಶಿಕ್ಷಣಕ್ಕೆ ಹೆಸರುವಾಸಿಯಾಗಿದೆ.

ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕ ವರ್ಗದವರು, ಜೆ.ಇ.ಇ (ಮೈನ್) ಪರೀಕ್ಷೆಯ ಸಂಯೋಜಕರಾದ ನಂದೀಶ್ ಎಚ್. ಬಿ, ಆದಿತ್ಯ ವಟಿ ಕೆ, ಮತ್ತು ವಿನಯ ಕುಮಾರ್‌ ಅವರು ಅಭಿನಂದನೆ ಸಲ್ಲಿಸಿದ್ದಾರೆ.

Exit mobile version