Site icon Kundapra.com ಕುಂದಾಪ್ರ ಡಾಟ್ ಕಾಂ

ಜೆ.ಇ.ಇ (ಮೇನ್ಸ್) ಫಲಿತಾಂಶ: ಶ್ರೀ ವೆಂಕಟರಮಣ ಪ.ಪೂ ಕಾಲೇಜಿನ ವಿದ್ಯಾರ್ಥಿಗಳ ಸಾಧನೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ರಾಷ್ಟ್ರಮಟ್ಟದಲ್ಲಿ ಜರುಗಿದ 2025 ನೇ ಸಾಲಿನ ಜೆಇಇ ಮೇನ್ಸ್ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಕುಂದಾಪುರದ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ 6 ವಿದ್ಯಾರ್ಥಿಗಳು ಕಾಲೇಜಿನಲ್ಲಿ ಲಭ್ಯವಿರುವ ಕೋಚಿಂಗ್ ನ ಸದುಪಯೋಗವನ್ನು ಪಡೆದುಕೊಂಡು  91 ಪರ್ಸೆಂಟೈಲ್ ಗಿಂತ ಅಧಿಕ ಫಲಿತಾಂಶ ದಾಖಲಿಸಿದ್ದಾರೆ.

ವಿದ್ಯಾರ್ಥಿಗಳಾದ ಅಮೂಲ್ಯಾ ಸಿ. ಶೆಟ್ಟಿ 95.11, ಅನುಷ್ ನಾಯಕ್ 94.23, ಚೈತ್ರಾ 93.31, ಕೀರ್ತನಾ 91.56, ಅಬ್ದುಸ್‌ ಸಲಾಂ 91.39, ಭೂಮಿಕಾ 91.05 ಪರ್ಸೆಂಟೈಲ್ ಪಡೆದಿರುತ್ತಾರೆ.

ಸಾಧಕ ವಿದ್ಯಾರ್ಥಿಗಳನ್ನು ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು  ಬೋಧಕ – ಬೋಧಕೇತರ ಸಿಬ್ಬಂದಿ ಅಭಿನಂದಿಸಿದ್ದಾರೆ.

Exit mobile version