ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ಇಲ್ಲಿನ ಹಡವು ಗ್ರಾಮದ ಪಡುಕೋಣೆ ನಿವಾಸಿ ಸೀತು (81) ಅವರು ಬೆಂಕಿ ಆಕಸ್ಮಿಕವಾಗಿ ತಾಗಿ ಮೃತಪಟ್ಟಿದ್ದಾರೆ.
ಬಚ್ಚಲು ಮನೆಯಲ್ಲಿ ಬೆಂಕಿ ಉರಿಸಿ ನೀರು ಕಾಯಿಸುತ್ತಿರುವಾಗ ಆಕಸ್ಮಿಕವಾಗಿ ಸೀತು ಅವರ ಸೀರೆಗೆ ಬೆಂಕಿ ತಗಲಿದ ಪರಿಣಾಮ ಸುಟ್ಟ ಗಾಯವಾಗಿದ್ದು, ಚಿಕಿತ್ಸೆಗೆಂದು ಕುಂದಾಪುರದ ಖಾಸಗಿ ಆಸ್ಪತ್ರೆಯಲ್ಲಿ ದಾಖಲು ಮಾಡಲಾಗಿತ್ತು. ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ ಆಸ್ಪತ್ರೆಗೆ ಕರೆದುಕೊಂಡು ಹೋಗಿ, ಅಲ್ಲಿ ವೈದ್ಯಕೀಯ ವೆಚ್ಚ ಭರಿಸಲಾಗದೇ ಮಂಗಳೂರಿನ ವೆಸ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಸೀತು ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟ ಬಗ್ಗೆ ಪ್ರಕರಣ ದಾಖಲಾಗಿದೆ.

