Site icon Kundapra.com ಕುಂದಾಪ್ರ ಡಾಟ್ ಕಾಂ

ಕುಂದಾಪುರ ಯುವ ಬಂಟರ ಸಂಘದಿಂದ ಹಿರಿಯ ಮಹಿಳಾ ಸಾಧಕಿಗೆ ಸನ್ಮಾನ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ಇಲ್ಲಿನ ಯುವ ಬಂಟರ ಸಂಘದ ಆಶ್ರಯದಲ್ಲಿ ಭಾರತದ ಪ್ರಥಮ ಮಹಿಳಾ ರಾಜ್ಯಪಾಲೆ, ಶ್ರೇಷ್ಠ ಕವಯತ್ರಿ, ಭಾರತದ ಕೋಗಿಲೆ ಸರೋಜಿನಿ ನಾಯ್ಡು ಅವರ ಜನ್ಮದಿನದ ಪ್ರಯುಕ್ತ ರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಸ್ವಾವಲಂಬಿ ಬದುಕು ಕಟ್ಟಿಕೊಂಡ ಉಪ್ಪಿನಕಾಯಿ ಅಜ್ಜಿ ಎಂದೇ ಖ್ಯಾತರಾದ ಕುಂದಾಪುರ ತಾಲೂಕಿನ ಸಿದ್ದಾಪುರ ಗ್ರಾಮದ ಐರಬೈಲು ನಿವಾಸಿ  ಗುಲಾಬಿ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು.

ಕುಂದಾಪುರ ತಾಲೂಕು ಯುವ ಬಂಟರ ಸಂಘದ ಪರವಾಗಿ ಸಂಘದ ಗೌರವಾಧ್ಯಕ್ಷರಾದ ವತ್ಸಲಾ ದಯಾನಂದ ಶೆಟ್ಟಿ ಅವರ ಸ್ವಗ್ರಹದಲ್ಲಿ ಸನ್ಮಾನಿಸಿ ಗೌರವಿಸಿದರು. ಯುವ ಬಂಟರ ಸಂಘ ಗ್ರಾಮೀಣ ಪ್ರದೇಶದಲ್ಲಿ ಸ್ವಾವಲಂಬಿ ಬದುಕನ್ನು ಕಟ್ಟಿಕೊಂಡ ಇಂತಹ ಗ್ರಾಮೀಣ ಪ್ರದೇಶದ ಮಹಿಳೆಯನ್ನು ಗುರುತಿಸಿ ಗೌರವಿಸುವುದು, ಶ್ಲಾಘನೀಯ. ಇಂತಹ ಕೆಲಸಗಳನ್ನು ಎಲ್ಲಾ ಸಂಘ ಸಂಸ್ಥೆಗಳು ಮಾಡಿದಾಗ ಮಹಿಳೆಯರಿಗೆ ಆತ್ಮವಿಶ್ವಾಸ ತುಂಬುವ ಜೊತೆಗೆ ಉತ್ತೇಜನ ನೀಡಿದಂತಾಗುತ್ತದೆ ಎಂದು ಹೇಳಿದರು.

ಸಂಘದ ಅಧ್ಯಕ್ಷ ನಿತೀಶ್ ಶೆಟ್ಟಿ ಬಸ್ರೂರು, ಸ್ಥಾಪಕಾಧ್ಯಕ್ಷರಾದ ಡಾ.ಅಂಪಾರು ನಿತ್ಯಾನಂದ ಶೆಟ್ಟಿ, ಕಾರ್ಯಕಾರಿ ಸಮಿತಿ ಸದಸ್ಯರಾದ ಜಯಪ್ರಕಾಶ್ ಶೆಟ್ಟಿ ಗೋಳಿಯಂಗಡಿ ಉಪಸ್ಥಿತರಿದ್ದರು.

 ಡಾ. ಚೇತನ್ ಶೆಟ್ಟಿ ಕೋವಾಡಿ ಕಾರ್ಯಕ್ರಮ ನಿರೂಪಿಸಿದರು.

Exit mobile version