Site icon Kundapra.com ಕುಂದಾಪ್ರ ಡಾಟ್ ಕಾಂ

ಕುಂದಬಾರಂದಡಿ ಶಾಲೆಯಲ್ಲಿ ಹೊಸಾಡು ಕ್ಲಸ್ಟರ್ ಮಟ್ಟದ ಎಫ್.ಎಲ್.ಎನ್. ಕಲಿಕಾ ಹಬ್ಬ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ಇಲ್ಲಿನ ಕುಂದಬಾರಂದಾಡಿ ಸ.ಹಿ.ಪ್ರಾ. ಶಾಲೆಯಲ್ಲಿ ಹೊಸಾಡು ಕ್ಲಸ್ಟರ್ ಮಟ್ಟದ ಎಫ್.ಎಲ್.ಎನ್. ಕಲಿಕಾ ಹಬ್ಬ ಮತ್ತು ಮಕ್ಕಳ ಸಂತೆ (ಮೆಟ್ರಿಕ್ ಮೇಳ) ಕಾರ್ಯಕ್ರಮ ಜರುಗಿತು.

ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಎಸ್.ಡಿ.ಎಮ್.ಸಿ. ಅಧ್ಯಕ್ಷರಾದ  ವಿಶ್ವನಾಥ ಗಾಣಿಗ ವಹಿಸಿದ್ದರು. ಕಾರ್ಯಕ್ರಮವನ್ನು ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಸುಭಾಷ್ ಶೆಟ್ಟಿ ಹೊಳ್ಮಗೆ ದೀಪ ಬೆಳಗಿಸುವುದರೊಂದಿಗೆ ಉದ್ಘಾಟಿಸಿದರು. ಶಾಲಾ ವಿದ್ಯಾರ್ಥಿಗಳು ಪ್ರಾರ್ಥಿಸಿದರು, ಮುಖ್ಯ ಶಿಕ್ಷಕರಾದ ಶಿವರಾಜ ಭಂಡಾರಿ ಎನ್. ಸ್ವಾಗತಿಸಿದರು. ಹೊಸಾಡು ಕ್ಲಸ್ಟರ್‌ನ ಸಮೂಹ ಸಂಪನ್ಮೂಲ ವ್ಯಕ್ತಿಗಳಾದ ಸತೀಶ್ ಶೆಟ್ಟಿ ಪ್ರಾಸ್ತಾವಿಕ ಮಾತುಗಳನ್ನು ನುಡಿದರು. ವೇದಿಕೆಯಲ್ಲಿ ಹಿರಿಯ ನಿವೃತ್ತ ಶಿಕ್ಷಕ ರಾಜೀವ್ ಶೆಟ್ಟಿ ನೂಜಾಡಿ, ಗ್ರಾಮ ಪಂಚಾಯತ್ ಸದಸ್ಯರಾದ ಭಾಸ್ಕರ್ ಪೂಜಾರಿ, ರತ್ನ ಜಿ. ಶ್ರೀಯಾನ್, ಹಳೇವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ನಿವೃತ್ತ ಶಿಕ್ಷಕ ಸಂಜೀವ್ ಬಿಲ್ಲವ, ಎಸ್.ಡಿ.ಎಂ.ಸಿ ಮಾಜಿ ಅಧ್ಯಕ್ಷರು ರವಿ ಎಸ್. ಪೂಜಾರಿ, ಹೆಮ್ಮಾಡಿ ವೃತ್ತದ ಶಿಕ್ಷಣ ಸಂಯೋಜಕಾರದ ಯೋಗೀಶ್, ಸಮೂಹ ಸಂಪನ್ಮೂಲ ವ್ಯಕ್ತಿಗಳಾದ ಎಂ. ನಾಗರಾಜ್ ಶೆಟ್ಟಿ, ರವಿಚಂದ್ರ, ಶೈಲಜಾ, ಶಾಲಾ ವಿದ್ಯಾರ್ಥಿ ನಾಯಕ ರಿಶಿ ಉಪಸ್ಥಿತರಿದ್ದರು.

ಸಹ ಶಿಕ್ಷಕಿ ತಾರಾ ಕಾರ್ಯಕ್ರಮವನ್ನು ನಿರೂಪಿಸಿದರು ಹಾಗು ಸಹ ಶಿಕ್ಷಕಿ ವಸಂತಿ ವಂದಿಸಿದರು. ತಿಮ್ಮಪ್ಪ ಶೆಟ್ಟಿ ಮುಖ್ಯ ಶಿಕ್ಷಕರು ನೂಜಾಡಿ -1, ಗೌರವ  ಶಿಕ್ಷಕಿಯರಾದ ದಿವ್ಯಾ ಮತ್ತು ಅರ್ಪಿತಾ ಸಹಕರಿಸಿದರು. ಕಲಿಕಾ ಹಬ್ಬದ ಕೇಂದ್ರ ಬಿಂದುಗಳಾದ ವಿದ್ಯಾರ್ಥಿಗಳು ತುಂಬಾ ಆಸಕ್ತಿಯಿಂದ, ಉಲ್ಲಾಸದಿಂದ, ವಿವಿಧ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡರು.

Exit mobile version